ಪುತ್ತೂರು:ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಗಾರ

0

ಪುತ್ತೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧಿ ಯೋಜನೆ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಸಹಯೋಗದಲ್ಲಿ ಸೆ.27ರಂದು ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.


ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪುತ್ತೂರು ಜನಜಾಗೃತಿ ವೇದಿಕೆಯ ಪುತ್ತೂರು ತಾಲೂಕಿನ ಅಧ್ಯಕ್ಷ ಲೋಕೇಶ್‌ ಹೆಗ್ಡೆ ವಹಿಸಿಕೊಂಡರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್‌ ವಿನ್ಸೆಂಟ್‌ ಪಾಯಸ್‌ ರವರು ನವ ಜೀವನ ಪೋಷಕರಿಗೆ ಮಾಹಿತಿ ಮಾರ್ಗದರ್ಶನ ನೀಡಿದರು.ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಯೋಜನಾಭಿವೃದ್ಧಿ ಗಣೇಶ್‌, ಜನಜಾಗೃತಿ ಮೇಲ್ವಿಚಾರಕರು ಹಾಗೂ ನವಜೀವನ ಪೋಷಕರು ಉಪಸ್ಥಿತರಿದ್ದರು. ದ.ಕ ಜಿಲ್ಲಾ ನಿರ್ದೇಶಕ ಪ್ರವೀಣ್‌ ಕುಮಾರ್‌ ಸ್ವಾಗತಿಸಿ,ಪುತ್ತೂರು ವಲಯ ಮೇಲ್ವಿಚಾರಕಿ ಶ್ರುತಿ ಕಾರ್ಯಕ್ರಮ ನಿರೂಪಿಸಿ,ಜಿಲ್ಲಾ ಪ್ರಬಂಧಕರ ಉಪೇಂದ್ರ ಕಾರ್ಯಕ್ರಮ ವಂದಿಸಿದರು.

LEAVE A REPLY

Please enter your comment!
Please enter your name here