ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಪುತ್ತೂರು ಹಾಗೂ ಸುದ್ದಿ ಕೃಷಿ ಕೇಂದ್ರ ಮತ್ತೂರು ಇದರ ಸಹಯೋಗದಲ್ಲಿ ಮಳೆ ನೀರು ಬಳಕೆ ಹಾಗೂ ಸೋಲಾರ್ ವಿದ್ಯುತ್ ಉತ್ಪಾದನೆ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ ಸೆ.29ರಂದು ಅಪರಾಹ್ನ ಗಂಟೆ 1.45ಕ್ಕೆ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಸಭೆಗೆ ಪ್ರತೀ ಗ್ರಾಮ ಪಂಚಾಯತನ ಆಸಕ್ತ ಇಬ್ಬರು ಚುನಾಯಿತ ಸದಸ್ಯರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಎಲ್ಲಾ ಸಿಬ್ಬಂದಿಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪುತ್ತೂರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಎಲ್ಲಾ ಸಿಬ್ಬಂದಿಗಳು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಪುತ್ತೂರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ನರೇಗಾ ಸಿಬ್ಬಂದಿಗಳು ಸದ್ರಿ ಮಾಹಿತಿ ಕಾರ್ಯಾಗಾರಕ್ಕೆ ಪಾಲ್ಗೊಳ್ಳುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೂಚಿಸಿದ್ದಾರೆ.