ವಿಟ್ಲ: ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ , ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲೂಕಿನ ನೆಲ್ಯಾಡಿ ಬಳಿಯ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಅಬ್ಬಾಸ್ ಅವರ ಮಗ ಇಬ್ರಾಹಿಂ (55 ವ.) ಬಂಧಿತ ಆರೋಪಿ.


2004 ರಲ್ಲಿ ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೆ ಪ್ರಕರಣ ದಾಖಲಾಗಿತ್ತು. ಇನ್ನೊಬ್ಬ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದು, ಇಬ್ರಾಹಿಂರವರು ತಲೆಮರೆಸಿಕೊಂಡಿದ್ದರು. ಇದೀಗ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಅನಂತಪದ್ಮನಾಭ ಮತ್ತು ಎಸ್.ಐ.ರಾಮಕೃಷ್ಣ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಗಣೇಶ್ ಮತ್ತು ಗೋಪಾಲಕೃಷ್ಣ ಅವರು ಆರೋಪಿಯನ್ನು ನೆಲ್ಯಾಡಿಯಲ್ಲಿ ಬಂಧಿಸಿದ್ದಾರೆ.
ಇದೀಗ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


LEAVE A REPLY

Please enter your comment!
Please enter your name here