ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿಯಾಗಿದ್ದ ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣ-ಆರು ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶ ರದ್ದುಗೊಳಿಸಿದ ಹೈಕೋರ್ಟ್

0

ಪುತ್ತೂರು: ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಆಡಳಿತ ಅಧಿಕಾರಿಯಾಗಿದ್ದ ಪ್ರೊ. ಎ. ಎಸ್. ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪು ರದ್ದುಗೊಳಿಸಿರುವ ಹೈಕೋರ್ಟ್ ಅವರನ್ನು ದೋಷಿಗಳೆಂದು ತೀರ್ಪು ನೀಡಿದೆ.

ಪ್ರಕರಣದಲ್ಲಿ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರನ್ನು ಸೇರಿದಂತೆ ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ ಐದನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದು ಕೋರಿ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಪರಿಶೀಲಿಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ರೇಣುಕಾ ಪ್ರಸಾದ್ , ಮನೋಜ್ ರೈ, ಎಚ್.ಆರ್.ನಾಗೇಶ್ , ವಾಮನ ಪೂಜಾರಿ, ಶರಣ್ ಪೂಜಾರಿ ಮತ್ತು ಶಂಕರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿರುವ ಹೈಕೋರ್ಟ್ ಎಲ್ಲರನ್ನೂ ಕೊಲೆ ಮತ್ತು ಅಪರಾಧಿಕ ಒಳಸಂಚು ಅಪರಾಧ ಕೃತ್ಯದಲ್ಲಿ ದೋಷಿಗಳನ್ನಾಗಿ ತೀರ್ಮಾನಿಸಿದೆ. ಅಕ್ಟೋಬರ್ ಐದರಂದು ಕೋರ್ಟಿಗೆ ಶರಣಾಗಲು ಆರೋಪಿಗಳಿಗೆ ಸೂಚನೆ ನೀಡಿರುವ ನ್ಯಾಯಾಲಯ ಅಂದು ಶಿಕ್ಷೆ ಪ್ರಮಾಣದ ಕುರಿತಂತೆ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಆದರೆ ಏಳನೇ ಆರೋಪಿಯಾಗಿದ್ದ ಹೆಚ್. ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

LEAVE A REPLY

Please enter your comment!
Please enter your name here