ಕಾಣಿಯೂರು: ಅಗಳಿ ಶ್ರೀ ಸದಾಶಿವ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಲೋಕೇಶ್ ಅಗಳಿ, ಕಾರ್ಯದರ್ಶಿಯಾಗಿ ಗಣೇಶ್ ಅಗಳಿ, ಉಪಾಧ್ಯಕ್ಷರಾಗಿ ಜಗದೀಶ್ ಅಗಳಿ ಹಾಗೂ ಜತೆ ಕಾರ್ಯದರ್ಶಿಯಾಗಿ ಲವಪ್ರಸಾದ್ ಅಗಳಿಯವರು ಆಯ್ಕೆಯಾಗಿದ್ದಾರೆ.
ನಿಕಟ ಪೂರ್ವ ಅಧ್ಯಕ್ಷ ಪುರಂದರ ಅಗಳಿ, ನಿಕಟ ಪೂರ್ವ ಕಾರ್ಯದರ್ಶಿ ಮನೋಜ್ ಅಗಳಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅನುವಂಶಿಯ ಮೊಕ್ತೇಸರರಾದ ಉದಯ ಕುಮಾರ್ ಅಗಳಿ, ಬೆಳಂದೂರು ಗ್ರಾ. ಪಂ. ಸದಸ್ಯ ಮೋಹನ್ ಅಗಳಿ ಹಾಗೂ ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.