





ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಗಳೂರು ಹಾಗೂ ಸ.ಪ.ಪೂ ಬಾಲಕಿಯರ ಕಾಲೇಜು, ಬಲ್ಮಠ ಮಂಗಳೂರು
ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಸೆ.27ರಂದು ನಡೆದ ದಕ್ಷಿಣ ಕನ್ನಡ ಪದವಿ ಪೂರ್ವ ಕಾಲೇಜು ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ನಂದನ್ ನಾಯ್ಕ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ನಂದನ್ ನಾಯ್ಕ್ 50 ಮೀಟರ್ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಚಿನ್ನದ ಪದಕ, 50 ಮೀಟರ್ ಫ್ರೀ ಸ್ಟೈಲ್ ನಲ್ಲಿ ಬೆಳ್ಳಿ ಪದಕ, 100 ಮೀಟರ್ ಫ್ರೀ ಸ್ಟೈಲ್ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಕಂಚಿನ ಪದಕ ಹಾಗೂ 4*100 ಫ್ರೀ ಸ್ಟೈಲ್ ರಿಲೆಯಲ್ಲಿ ಕಂಚಿನ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು ಮುಕ್ವೆ ಮಜಲುಮಾರು ನಿವಾಸಿ ರವಿ ಸಂಪತ್ ನಾಯ್ಕ್ ಮತ್ತು ಕ್ಷಮಿತ ದಂಪತಿಯ ಪುತ್ರ. ಇವರು ಪುತ್ತೂರು ಶಿವರಾಮ ಕಾರಂತ ಬಾಲವನದ ಈಜುಕೊಳದಲ್ಲಿ ಪುತ್ತೂರು ಆಕ್ವಾಟಿಕ್ ಕ್ಲಬ್‌ನಲ್ಲಿ ತರಬೇತುದಾರರಾದ ಪಾರ್ಥ ವಾರಣಾಸಿ, ದೀಕ್ಷಿತ್, ರಾಜೇಶ್ ಮತ್ತು ನಿರೂಪ್‌ರಿಂದ ತರಬೇತಿ ಪಡೆಯುತ್ತಿದ್ದಾರೆ.












