ಅ.1:ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 19ನೇ ಉಚಿತ ವೈದ್ಯಕೀಯ ಶಿಬಿರ

0

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಸಂಪ್ಯ ಹಾಗೂ ಆರೋಗ್ಯ ರಕ್ಷಾ ಸಮಿತಿ ಸಂಪ್ಯ ಇದರ ಆಶ್ರಯದಲ್ಲಿ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಪ್ರತಿ ತಿಂಗಳು ನಡೆಯುವ ಉಚಿತ ವೈದ್ಯಕೀಯ ಶಿಬಿರದ 19ನೇ ತಿಂಗಳ ವೈದ್ಯಕೀಯ ಶಿಬಿರವು ಅ.1ರಂದು ನಡೆಯಲಿದೆ.


ಸಾಮಾನ್ಯ ವೈದ್ಯಕೀಯ ತಪಾಸಣೆ, ಮಕ್ಕಳ ವೈದ್ಯಕೀಯ ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ, ಔಷಧಿಗಳ ವಿತರಣೆ ನಡೆಯಲಿದೆ. ಈ ಬಾರಿಯ ಶಿಬಿರದಲ್ಲಿ ವಿಶೇಷವಾಗಿ ತಿಂಗಳಾಡಿಯ ಆರೋಗ್ಯ ಕೇಂದ್ರದ ವತಿಯಿಂದ ಆಬಾ ಕಾರ್ಡ್ ನೋಂದಣಿಯು ನಡೆಯಲಿರುವುದು. ನುರಿತ ತಜ್ಞ ವೈದ್ಯರುಗಳು ಶಿಬಿರದಲ್ಲಿ ಭಾಗವಹಿಸಿ ತಪಾಸಣೆ ನಡೆಸಿಕೊಡಲಿದ್ದಾರೆ. ಆಬಾ ಕಾರ್ಡ್ ನೋಂದಾಯಿಸಿಕೊಳ್ಳುವ ಫಲಾನುಭವಿಗಳು ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಸಂದೇಶ ಬರುವ ಮೊಬೈಲ್ ಫೋನ್ ತರಬೇಕಾಗುತ್ತದೆ. ಶಿಬಿರವು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ.


ಸ್ವಚ್ಚತೆ:
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ ಶಿಬಿರದಲ್ಲಿ ಮಧ್ಯಾಹ್ನ 11 ರಿಂದ ದೇವಸ್ಥಾನದ ಸುತ್ತಮುತ್ತ ಸ್ವಚ್ಛತಾ ಕಾರ್ಯ ನಡೆಯಲಿದೆ ಎಂದು ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here