ಪುಣಚ: ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ

0

ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ತೋಟದ ಕೆರೆಯಲ್ಲಿ ಪತ್ತೆಯಾದ ಘಟನೆ ಪುಣಚ ಗ್ರಾಮದ ಮಲೆತ್ತಡ್ಕದಲ್ಲಿ ನಡೆದಿದೆ.
ಪುಣಚ ಗ್ರಾಮದ ಮಲೆತ್ತಡ್ಕ ನಿವಾಸಿ ಜಯರಾಮ ಭಟ್ (40 ವ.)ಮೃತಪಟ್ಟವರಾಗಿದ್ದಾರೆ.

ಜಯರಾಮ ಭಟ್ ರವರು ಸೆ.27ರಂದು ಬೆಳಗ್ಗೆ ಮಗುವನ್ನು ಶಾಲೆಗೆ ಬಿಟ್ಟು ಬರುವುದಾಗಿ ಹೋಗಿದ್ದು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಮನೆಯವರು ವಿವಿಧೆೆಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇದೀಗ ಅವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ.

ಮೃತದೇಹವನ್ನು ಮೇಲಕ್ಕೆತ್ತಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಜರು ನಡೆಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ತಂದೆ, ತಾಯಿ ಹಾಗೂ ಪುತ್ರನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here