ದ.ಕ.ಜಿಲ್ಲೆಯಲ್ಲಿ ಬಂದ್‌ಗೆ ಬೆಂಬಲವಿಲ್ಲ-ಸೆ. 29ರಂದು ಎಂದಿನಂತೆ ವಾಹನ ಓಡಾಟ-ಶಾಲಾ ಕಾಲೇಜುಗಳ ಕಾರ್ಯನಿರ್ವಹಣೆ

0

ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ಸೆ.29ರಂದು ರಾಜ್ಯ ಬಂದ್‌ಗೆ ಕರೆ ನೀಡಿದ್ದರೂ ದ.ಕ. ಜಿಲ್ಲೆಯಲ್ಲಿ ಎಂದಿನಂತೆ ಶಾಲಾ ಕಾಲೇಜುಗಳು ಕಾರ್ಯಾಚರಿಸಲಿವೆ.ಸರಕಾರಿ ಕಾಲೇಜುಗಳು ಕೂಡ ಸೆ.29ರಂದು ತೆರೆದಿರುತ್ತವೆ ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಮಂಗಳೂರು:ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸುವ ಕ್ರಮ ವಿರೋಧಿಸಿ ರಾಜ್ಯ ಸರಕಾರದ ವಿರುದ್ಧ ಸೆ.29ರಂದು ವಿವಿಧ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಕರೆಗೆ ದ.ಕ.ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿಲ್ಲ.ಜಿಲ್ಲೆಯಲ್ಲಿ ಖಾಸಗಿ ಬಸ್, ಆಟೋರಿಕ್ಷಾಗಳು ಎಂದಿನಂತೆ ಸಂಚರಿಸಲಿದೆ.ಜಿಲ್ಲೆಯಲ್ಲಿ ಶಾಲೆ,ಕಾಲೇಜುಗಳೂ ಎಂದಿನಂತೆ ಕಾರ್ಯನಿರ್ವಹಿಸಲಿವೆ.

ದ.ಕ ಜಿಲ್ಲೆಯಲ್ಲಿ ಸೆ.29ರಂದೂ ಎಲ್ಲವೂ ಯಥಾಸ್ಥಿತಿಯಲ್ಲಿ ಇರಲಿದೆ, ಕೇವಲ ನೈತಿಕ ಬೆಂಬಲ ಮಾತ್ರ ನೀಡಲಾಗುವುದು.ಎತ್ತಿನಹೊಳೆ ವಿಚಾರದಲ್ಲಿ ಕನ್ನಡ ಸಂಘಟನೆಗಳ ಬೆಂಬಲ ಕೇಳಿದ್ದೆವು.ಆಗ ನೀರು ಎಲ್ಲರ ಹಕ್ಕು ಎಂದು ಹೇಳಿ ಬೆಂಬಲ ನೀಡಿಲ್ಲ. ತುಳು ಭಾಷೆ ವಿಚಾರದ ಹೋರಾಟದಲ್ಲಿ ನಮಗೆ ಬೆಂಬಲ ಸಿಕ್ಕಿಲ್ಲ, ತುಳು ಭಾಷೆ ಬಗ್ಗೆ ಚರ್ಚೆ ಆದಾಗ ಆ ಭಾಗದ ಶಾಸಕರು ತಮಾಷೆ ಮಾಡಿದ್ದರು.

ಎತ್ತಿನ ಹೊಳೆ ಅವೈಜ್ಞಾನಿಕ ಎಂದು ಗೊತ್ತಿದ್ದರೂ ನಮ್ಮ ಹೋರಾಟಕ್ಕೆ ಬೆಂಬಲ ನೀಡಿಲ್ಲ.ಹೀಗಾಗಿ ಬಂದ್‌ಗೆ ನಮ್ಮ ನೈತಿಕ ಬೆಂಬಲ ಮಾತ್ರವೇ ಇದೆ. ಬಸ್‌ಗಳ ಓಡಾಟ ಎಲ್ಲವೂ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ಖಾಸಗಿ ಬಸ್ ಮಾಲೀಕರ ಸಂಘದ ಮಾಜಿ ಅಧ್ಯಕ್ಷ, ಸಾಮಾಜಿಕ ಹೋರಾಟಗಾರ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ.

ಎಂದಿನಂತೆ ಖಾಸಗಿ ಬಸ್ಸುಗಳ ಓಡಾಟ: ದ.ಕ.ಜಿಲ್ಲೆಯಲ್ಲಿ ಎಂದಿನಂತೆ ಸೆ.29ರಂದೂ ಬಸ್ ಸಂಚಾರ ಕಾರ್ಯಾಚರಿಸಲಿದೆ ಎಂದು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ತಿಳಿಸಿದ್ದಾರೆ.

ಕಾವೇರಿ ವಿಚಾರದಲ್ಲಿ ನಡೆಯುವ ಹೋರಾಟದ ಬಗ್ಗೆ ನಮಗೆ ಸಹಾನುಭೂತಿಯಿದೆ.ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕಿದೆ.ಆದರೆ, ಪರೀಕ್ಷೆಯ ಸಂದರ್ಭ ಬಂದ್ ಮಾಡಿದರೆ ಅದರ ಪರಿಣಾಮ ವಿದ್ಯಾರ್ಥಿಗಳ ಮೇಲಾಗಲಿದೆ.ಅಲ್ಲದೆ ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಿದರೆ ಅದರಿಂದ ಜನಸಾಮಾನ್ಯರು ಸಂಕಷ್ಟಕ್ಕೀಡಾಗಲಿದ್ದಾರೆ. ಹಾಗಾಗಿ ಸೆ.29ರಂದು ದ.ಕ.ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳು ಎಂದಿನಂತೆ ಸಂಚರಿಸಲಿದೆ ಎಂದು ಅಝೀಝ್ ಪರ್ತಿಪ್ಪಾಡಿ ಪ್ರತಿಕ್ರಿಯಿಸಿದ್ದಾರೆ.

LEAVE A REPLY

Please enter your comment!
Please enter your name here