ಮಂಗಳೂರು: ಜಿಲ್ಲೆಯಲ್ಲಿ ಮಳೆಯ ಕೊರತೆಯ ಕೂಗು ಕೇಳಿಬರುತ್ತಿದ್ದ ನಡುವೆಯೇ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು ಅಕ್ಟೋಬರ್ 2 ರವರೆಗೆ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಿಡಿಲಿನ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ 64.5ಮಿ.ಮೀ.ನಿಂದ 155.5ಮಿ.ಮೀ. ಮಳೆಯೊಂದಿಗೆ ಬಿರುಗಾಳಿ, ಗುಡುಗು, ಸಿಡಿಲು ಕಾಣಿಸಿಕೊಳ್ಳಲಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ತಿಳಿಸಿದೆ.