ವಿಟ್ಲ : ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಹಿಂಬಾಲಿಸಿ ಕಿರುಕುಳ ನೀಡಿದ ಯುವಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಪೆರುವಾಯಿ ಮೂಲದ ಯುವಕನೋರ್ವ ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದು ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇತ್ತೀಚೆಗೆ ಶಾಲೆ ಸಮೀಪ ಬಂದು ಬಾಲಕಿಯನ್ನು ಬೈಕ್ ನಲ್ಲಿ ಕೂರುವಂತೆ ಹೇಳಿದ್ದು, ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸಿದ್ದಾನೆ ಎನ್ನಲಾಗಿದೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ವಿಚಾರ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ತಿಳಿಸಿದ್ದು, ಘಟನೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.