ಸೆ.30: ಪುತ್ತೂರು ಅ.ಭಾ.ಸಾ.ಪ ಸಮಿತಿಯ ನೂತನ ಪದಾಧಿಕಾರಿಗಳ ಘೋಷಣೆ ಹಾಗೂ ಉಪನ್ಯಾಸ ಕಾರ್ಯಕ್ರಮ

0

ಪುತ್ತೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಪುತ್ತೂರು ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ ಘೋಷಣೆ ಹಾಗೂ ಉಪನ್ಯಾಸ ಕಾರ್ಯಕ್ರಮ ಸೆ.30ರಂದು ಮಧ್ಯಾಹ್ನ 2 ಕ್ಕೆ ಪುತ್ತೂರು ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ.

ಹಿರಿಯ ಪತ್ರಕರ್ತ ಪ್ರೊ.ವಿ.ಬಿ.ಅರ್ತಿಕಜೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಭಾಸಾಪ ದ.ಕ.ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ವಿಭಾಗ ಸಂಯೋಜಕ ಸುಂದರ ಶೆಟ್ಟಿ ಇಳಂತಿಲ ಪದಾಧಿಕಾರಿಗಳ ಹೆಸರು ಘೋಷಣೆ ಮಾಡಲಿದ್ದಾರೆ. ರಾಮಕುಂಜೇಶ್ವರ ಮಹಾ ವಿದ್ಯಾಲಯದ ಪ್ರಾಂಶುಪಾಲ ಗಣರಾಜ ಕುಂಬ್ಳೆ ಅವರು ಸಾಹಿತ್ಯದಲ್ಲಿ ರಾಷ್ಟ್ರೀಯತೆ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here