ಕೆಮ್ಮಿಂಜೆ: ಮಹಿಳಾ ಜ್ಞಾನವಿಕಾಸ ಕೇಂದ್ರದ ಕಾರ್ಯಕ್ರಮದಡಿ ಬೀದಿ ನಾಟಕ, ಮಾಹಿತಿ ಕಾರ್ಯಕ್ರಮ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪುತ್ತೂರು ಯೋಜನಾ ಕಛೇರಿ ವ್ಯಾಪ್ತಿಯ ಕೆಮ್ಮಿಂಜೆಯಲ್ಲಿ ಮಹಿಳಾ ಜ್ಞಾನವಿಕಾಸ ಕೇಂದ್ರದ ಕಾರ್ಯಕ್ರಮದಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕ ದಲ್ಲಿ ಬೀದಿ ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ನೀರಿನ ಸದ್ಬಳಕೆ, ವಾಹನ ಅಪಘಾತಗಳ ಬಗ್ಗೆ ಮುನ್ನೆಚ್ಚರಿಕೆ, ಸಂಚಾರಿ ನಿಯಮಗಳನ್ನು ಪಾಲಿಸುವ ಬಗ್ಗೆ, ಅತಿಯಾಗಿ ಮೊಬೈಲ್ ಬಳಕೆಯಿಂದಾಗುವ ಸಮಸ್ಯೆಗಳ ಬಗ್ಗೆ, ಆರೋಗ್ಯ ದ ಬಗ್ಗೆ, ಪ್ಲಾಸ್ಟಿಕ್ ಬಳಕೆಯಿಂದಾಗುವ ಸಮಸ್ಯೆಗಳ ಬಗ್ಗೆ “ಸಂಸಾರ ಜೋಡುಮಾರ್ಗ “ಬೀದಿನಾಟಕ ತಂಡದವರು ಮಾಹಿತಿ ನೀಡಿದರು.


ಆನಡ್ಕ ಒಕ್ಕೂಟದ ಅಧ್ಯಕ್ಷರಾದ ರೇಣುಕಾರವರು ಕಾರ್ಯಕ್ರಮ ಉದ್ಘಾಟಿಸಿ, ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಜ್ಞಾನವಿಕಾಸ ಕಾರ್ಯಕ್ರಮ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದೆ, ಮನೆಯೊಳಗಿದ್ದ ಮಹಿಳೆಯರು ಸಮಾಜದಲ್ಲಿ ಸ್ವಾವಲಂಬಿಯಾಗಿ ಜೀವಿಸಲು, ಧೈರ್ಯದಿಂದ ಮಾತನಾಡಲು ಜ್ಞಾನವಿಕಾಸ ಕಾರ್ಯಕ್ರಮ ಸಹಾಯವಾಗಿದೆ ಎಂದರು. ಕೆಮ್ಮಿಂಜೆ ವಲಯದ ಮೇಲ್ವಿಚಾರಕರಾದ ಪುಷ್ಪಲತಾ, ತಾಲೂಕು ಜ್ಞಾನವಿಕಾಸ ಸಮನ್ವಯಧಿಕಾರಿ ಕಾವ್ಯಶ್ರೀ, ಹಿರಿಯ ರಂಗಕಲಾವಿದ ಐ.ಕೆ ಬೊಳುವಾರು,ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಮೋಹಿನಿ, ಜ್ಞಾನವಿಕಾಸ ಕೇಂದ್ರದ ಸದಸ್ಯರು ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here