ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಯಕ್ಷರಂಗ ಪುತ್ತೂರು ವತಿಯಿಂದ ರಸಿಕರತ್ನ ವಿಟ್ಲ ಜೋಷಿ ಪ್ರತಿಷ್ಠಾನ ಮತ್ತು ಹಾಸ್ಯರತ್ನ ನಯನ ಕುಮಾರ್ ಅಭಿಮಾನಿ ಬಳಗದ ಸಹಭಾಗಿತ್ವದೊಂದಿಗೆ ಯಕ್ಷಗಾನ ತಾಳಮದ್ದಳೆ, ಗುರು ಶಿಷ್ಯ – ಸಂಸ್ಮರಣೆ ಕಾರ್ಯಕ್ರಮ ಅ.2ರಂದು ದಿನಪೂರ್ತಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಜರಗಲಿದೆ.
ಪೂರ್ವಾಹ್ನ 9.30ರಿಂದ ಸೇರಾಜೆ ಸೀತಾರಾಮ ಭಟ್ಟ ವಿರಚಿತ ಹವ್ಯಕ ಪೌರಾಣಿಕ ಕಥಾನಕ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಪುತ್ತೂರು ರಮೇಶ ಭಟ್ ಮೃದಂಗ ಮತ್ತು ಚೆಂಡೆಯಲ್ಲಿ ಲಕ್ಷ್ಮೀ ನಾರಾಯಣ ಅಡೂರು ಚಂದ್ರಶೇಖರ ಕೊಂಕಣಾಜೆ ಅರ್ಥಧಾರಿಗಳಾಗಿ ಹಿರಣ್ಯ ವೆಂಕಟೇಶ್ವರ ಭಟ್, ಸುಣ್ಣಂಬಳ ವಿಶ್ವೇಶ್ವರ ಭಟ್ಟ, ಶಂಭು ಶರ್ಮ ವಿಟ್ಲ, ರಾಧಾಕೃಷ್ಣ ಕಲ್ಚಾರ್, ಸೇರಾಜೆ ಸೀತಾರಾಮ ಭಟ್ಟ, ಪಶುಪತಿ ಶಾಸ್ತ್ರಿ, ಡಾ. ಹರೀಶ್ ಜೋಷಿ ವಿಟ್ಲ, ಹರೀಶ ಬಳಂತಿಮೊಗರುರವರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12.30 ರಿಂದ ರಸಿಕ ರತ್ನ ವಿಟ್ಲ ಜೋಷಿ ಪ್ರತಿಷ್ಠಾನ ಮತ್ತು ಹಾಸ್ಯರತ್ನ ನಯನ ಕುಮಾರ್ ಗುರುಶಿಷ್ಯ – ಸಂಸ್ಕರಣೆ ಜರಗಲಿದ್ದು, ಅಧ್ಯಕ್ಷತೆಯನ್ನು ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ ಮುಳಿಯ ವಹಿಸಲಿದ್ದಾರೆ. ಯಕ್ಷಗಾನ ಕಲಾಪೋಷಕರಾದ ಟಿ. ಶ್ಯಾಮ್ ಭಟ್ ಸನ್ಮಾನ ನಡೆಸಿಕೊಡಲಿದ್ದಾರೆ. ಹವ್ಯಕ ಯಕ್ಷಗಾನ ಕೃತಿಕಾರಾದ ಸೇರಾಜೆ ಸೀತಾರಾಮ ಭಟ್ ರವನ್ನು ವಿದ್ವಾನ್ ಹಿರಣ್ಯ ವೆಂಕಟೇಶ್ವರ ಭಟ್ ರವರು ಅಭಿನಂದಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಮಾಲಕ ಬಲರಾಮ ಆಚಾರ್ ರವರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2 ರಿಂದ : ಯಕ್ಷಗಾನ ತಾಳಮದ್ದಳೆ
ಮಾತಂಗ ಕನ್ಯೆ (ಪುರುಷೋತ್ತಮ ಪೂಂಜ ವಿರಚಿತ ಪೌರಾಣಿಕ ಕಥಾನಕ) ನಡೆಯಲಿದ್ದು, ಹಿಮ್ಮೇಳದಲ್ಲಿ ಭಾಗವತರರಾಗಿ ಕುರಿಯ ಗಣಪತಿ ಶಾಸ್ತ್ರಿ ರವಿಚಂದ್ರ ಭಟ್ ಪದ್ಯಾಣ, ಮೃದಂಗ ಮತ್ತುಚೆಂಡೆಯಲ್ಲಿ ಪದ್ಯಾಣ ಶಂಕರನಾರಾಯಣ ಭಟ್ , ಲಕ್ಷ್ಮೀನಾರಾಯಣ ಅಡೂರು, ಶ್ರೀ ರಾಮಮೂರ್ತಿ ಕುದ್ರಕೋಡ್ಲು ಹಾಗೂ
ಚಕ್ರತಾಳದಲ್ಲಿ ರಾಜೇಂದ್ರ ಅರ್ಥಧಾರಿಗಳಾಗಿ ಸೂರಿಕುಮೇರಿ ಗೋವಿಂದ ಭಟ್ಟ, ಸುಣ್ಣಂಬಳ ವಿಶ್ವೇಶ್ವರ ಭಟ್ಟ, ವಿದ್ವಾನ್ ಹಿರಣ್ಯ ವೆಂಕಟೇಶ್ವರ ಭಟ್, ರಾಧಾಕೃಷ್ಣ ಕಲ್ಚಾರ್, ಹರೀಶ ಬಳಂತಿಮೊಗೇರು, ಪಶುಪತಿ ಶಾಸ್ತ್ರಿ, ಸೇರಾಜೆ ಸೀತಾರಾಮ ಭಟ್ ಡಾ. ಹರೀಶ್ ಜೋಷಿ ವಿಟ್ಲರವರು ಭಾಗವಹಿಸಲಿದ್ದಾರೆ ಎಂದು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಮತ್ತು
ಪುತ್ತೂರು ಯಕ್ಷರಂಗದ ಅಧ್ಯಕ್ಷ ಸೀತಾರಾಮ ಶಾಸ್ತ್ರಿ ಕಾಡೂರು ಹಾಗೂ ರಸಿಕ ರತ್ನ, ವಿಟ್ಲ ಜೋಷಿ, ಪ್ರತಿಷ್ಠಾನ ಮತ್ತು ಹಾಸ್ಯರತ್ನ ನಯನ ಕುಮಾರ್ ಅಭಿಮಾನಿ ಬಳಗದ ಪ್ರಕಟಣೆ ತಿಳಿಸಿದೆ.