ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 3 ಮತ್ತು 4ರಂದು ವಿವೇಕ ವಿಜ್ಞಾನ-2023

0

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜು ಮತ್ತು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಇದರ ಜಂಟಿ ಆಶ್ರಯದಲ್ಲಿ ಪುತ್ತೂರು ತಾಲೂಕಿನ ಮತ್ತು ಆಸುಪಾಸಿನ ಪ್ರೌಢಶಾಲಾ ವಿಜ್ಞಾನ & ಗಣಿತ ಅಧ್ಯಾಪಕರ ಕಾರ್ಯಾಗಾರ ವಿವೇಕ ವಿಜ್ಞಾನ-2023 ಕಾರ್ಯಕ್ರಮವು ಅಕ್ಟೋಬರ್ 3 ಮತ್ತು 4 ರಂದು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಅಕ್ಟೋಬರ್ 3 ರಂದು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ವಹಿಸಲಿದ್ದು, ಪುತ್ತೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕೃಷ್ಣಪ್ರಕಾಶ್ ಬಳ್ಳಂಬೆಟ್ಟು ಭಾಗವಹಿಸಲಿದ್ದಾರೆ. ಪುತ್ತೂರು ತಾಲೂಕು ಎಸ್ ಎಸ್ ಎಲ್ ಸಿ ನೋಡಲ್ ಅಧಿಕಾರಿ ಹರಿಪ್ರಸಾದ ಎಂ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ನಂತರ ಭೌತಶಾಸ್ತ್ರ, ರಾಸಾಯನಶಾಸ್ತ್ರ & ಜೀವಶಾಸ್ತ್ರ ಪ್ರಯೋಗಗಳ ಪ್ರಾತ್ಯಕ್ಷಿಕೆ ಮತ್ತು ವಿವರಣೆ ಹಾಗೂ 10ನೇ ತರಗತಿಯ ಗಣಿತ ಪಠ್ಯಕ್ರಮ ಬಗ್ಗೆ ಉಪನ್ಯಾಸ ಕಾರ್ಯಕ್ರಮವು ನಡೆಯಲಿದೆ. ಅಕ್ಟೋಬರ್ 4 ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಗೋಪಾಲಕೃಷ್ಣ ಭಟ್ ಅಧ್ಯಕ್ಷತೆಯನ್ನು ವಹಿಸಲಿದ್ದು, ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ಪುತ್ತೂರು ತಾಲೂಕು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ ಎಸ್ ಎ ಮತ್ತು ಕಡಬ ತಾಲೂಕು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಶಾಂತಾರಾಮ್ ಒಡ್ಲ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಸುಮಾರು 200 ಅಧ್ಯಾಪಕರಿಗೆ ಈ ಶಿಬಿರದ ಸದುಪಯೋಗವನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಲಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here