ನಿಡ್ಪಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಟ್ಟಂಪಾಡಿ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬೆಟ್ಟಂಪಾಡಿ ವಲಯ ಇವುಗಳ ಸಹಭಾಗಿತ್ವದಲ್ಲಿ ಬೆಟ್ಟಂಪಾಡಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸೆ.29 ರಂದು ನಡೆಯಿತು.
ಬೆಟ್ಟಂಪಾಡಿ ಪದವಿಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕಿ ರಜನಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಪುತ್ತೂರು ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಸೈಯದ್ ಫಾರೂಕ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಯೋಜನಾಧಿಕಾರಿ ಶಶಿಧರ್ ಕಾರ್ಯಕ್ರಮದ ಉದ್ದೇಶದ ಬಗ್ಗೆ ಹಾಗೂ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಬೆಟ್ಟಂಪಾಡಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರವಿ ಕಟೀಲ್ತಡ್ಕ, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯ ಜಗನ್ನಾಥ ರೈ ಕೊಮ್ಮಂಡ, ಬೆಟ್ಟಂಪಾಡಿ ವಲಯ ಒಕ್ಕೂಟಗಳ ಅಧ್ಯಕ್ಷ ಬಾಲಕೃಷ್ಣ ಪೇರಲ್ತಡ್ಕ, ಬೆಟ್ಟಂಪಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ದೆಯ್ಯರಡ್ಕ, ವಲಯದ ನವಜೀವನ ಸಮಿತಿ ಪೋಷಕಿ ಜಯಶ್ರೀ.ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪನ್ಯಾಸಕಿ ಗಾಯತ್ರಿ ಸ್ವಾಗತಿಸಿ ಕಕ್ಕೂರು ಒಕ್ಕೂಟದ ಸೇವಾ ಪ್ರತಿನಿಧಿ ಪದ್ಮಾವತಿ. ಡಿ ವಂದಿಸಿದರು. ವಲಯ ಮೆಲ್ವೀಚಾರಕ ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ವಲಯ ಮೇಲ್ವಿಚಾರಕ ಚಂದ್ರಶೇಖರ್ ರೆಂಜ ಕಾರ್ಯಕ್ಷೇತ್ರ ಸೇವಾ ಪ್ರತಿನಿಧಿ ಜಗನ್ನಾಥ ಪಾಟಾಳಿ ಮತ್ತೀತರರು ಸಹಕರಿಸಿದರು.