ಅ.2: ಡ್ರಗ್ಸ್ ಮುಕ್ತ ಗ್ರಾಮ ಅಭಿಯಾನ

0

ಉಪ್ಪಿನಂಗಡಿ: ಇಲ್ಲಿನ ನೇತ್ರಾವತಿ ಆಟೋ ಚಾಲಕ ಮಾಲಕರ ಸಂಘ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಪ್ಪಿನಂಗಡಿ ಹಾಗೂ ವಿವಿಧ ಸಮಾಜಮುಖಿ ಸಂಘಟನೆಗಳ ಆಶ್ರಯದಲ್ಲಿ ಅ.2ರಂದು ಉಪ್ಪಿನಂಗಡಿಯಲ್ಲಿ ಡ್ರಗ್ಸ್ ಮುಕ್ತ ಗ್ರಾಮ ಜನಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿದೆ ಎಂದು ನೇತ್ರಾವತಿ ಆಟೋ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷ, ವರ್ತಕ ಸಂಘದ ಉಪಾಧ್ಯಕ್ಷ ಶಬ್ಬೀರ್ ಕೆಂಪಿ ತಿಳಿಸಿದರು.
ಸೆ.30ರಂದು ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮಾದಕ ವ್ಯಸನ ತೊಲಗಿಸೋಣ, ಸುಂದರ ಸಮಾಜ ಸೃಷ್ಟಿಸೋಣ” ಎಂಬ ಘೋಷ ವಾಕ್ಯದೊಂದಿಗೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಕಾಲ್ನಡಿಗೆ ಜಾಥಾ ಹೊರಟು ಗಾಂಧಿಪಾರ್ಕ್ ತನಕ ಸಾಗಿ ಅಲ್ಲಿಂದ ಹೆದ್ದಾರಿ ಮೂಲಕ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಜಾಥಾ ಸಮಾಪನಗೊಳ್ಳಲಿದೆ. ಆ ಬಳಿಕ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್., ಡಿವೈಎಫ್‌ಐ. ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಎಸ್ಕೆಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕೌಸರಿ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಸಮಿತಿ ಅಧ್ಯಕ್ಷ ಗಣೇಶ್ ಭಟ್, ಮಾಲಿಕುದೀನಾರ್ ಜುಮಾ ಮಸೀದಿ ಅಧ್ಯಕ್ಷ ಹಾಜಿ ಎಚ್. ಯೂಸುಫ್ ಹಾಜಿ, ಅನುಗ್ರಹ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಿನ್ಸೆಂಟ್ ಫೆರ್ನಾಂಡಿಸ್, ಉಪ್ಪಿನಂಗಡಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜೇಶ್, ವಕೀಲೆ ಹರಿಣಾಕ್ಷಿ, ಎಂ.ಎಂ. ಮೆಹ್ರೂಫ್ ಸುಲ್ತಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಶಬ್ಬೀರ್ ಕೆಂಪಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಡಿ’ಕೋಸ್ತ, ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಯುನಿಕ್, ಗ್ರಾಮ ಪಂಚಾಯತ್ ಸದಸ್ಯ ಯು.ಟಿ. ತೌಸೀಫ್, ಅಭಿಯಾನದ ಸಂಚಾಲಕ ಯು.ಟಿ. ಇರ್ಷಾದ್, ನೇತ್ರಾವತಿ ಆಟೋ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳಾದ ಅಶೋಕ್ ಹಿರೇಬಂಡಾಡಿ, ಫಾರೂಕ್ ಝಿಂದಗಿ, ಆಶಿಫ್ ಕೊಲ, ಇಬ್ರಾಹಿಂ ಆಚಿ, ಮಜೀದ್, ರಿಯಾಝ್, ಶುಕೂರ್ ಮೇದರಬೆಟ್ಟು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here