ಕೆದಂಬಾಡಿ ಗ್ರಾಪಂನಿಂದ ಸ್ವಚ್ಛತಾ ಕಾರ್ಯಕ್ರಮ

0

ಪುತ್ತೂರು: ಗಾಂಧಿ ಜಯಂತಿ ಹಿನ್ನಲೆಯಲ್ಲಿ ಅ.1ರಂದು ದೇಶದಾದ್ಯಂತ 1 ಗಂಟೆ ಕಾಲ ಶ್ರಮದಾನ ಮಾಡಲು ಪ್ರಧಾನಿ ಮೋದಿ ಕರೆ ನೀಡಿದ್ದು ಜನರು ಸ್ವಯಂ ಪ್ರೇರಿತವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂಬುದು ಮೋದಿ ಅವರ ಆಶಯವಾಗಿತ್ತು. ಈ ಹಿನ್ನಲೆಯಲ್ಲಿ ಕೆದಂಬಾಡಿ ಗ್ರಾಪಂ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ತಿಂಗಳಾಡಿ ಪೇಟೆ, ಇದ್ಪಾಡಿ ಆಟದ ಮೈದಾನ, ಸನ್ಯಾಸಿಗುಡ್ಡೆ ಪರಿಸರ ಸೇರಿದಂತೆ ಹಲವು ಕಡೆಗಳಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಯಿತು. ಗ್ರಾಪಂನೊಂದಿಗೆ ಜಯ ಕರ್ನಾಟಕ ಸಂಘಟನೆ ಸದಸ್ಯರು, ಅಟೋ ಚಾಲಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,ಸಂಜೀವಿನಿ ಒಕ್ಕೂಟದವರು, ವರ್ತಕರು ಕೈಜೋಡಿಸಿದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ, ಅಧ್ಯಕ್ಷೆ ಸುಜಾತ ಮುಳಿಗದ್ದೆ, ಉಪಾಧ್ಯಕ್ಷೆ ಜಯಲಕ್ಷ್ಮೀ ಬಲ್ಲಾಳ್, ಮಾಜಿ ಅಧ್ಯಕ್ಷ ರತನ್ ರೈ ಕುಂಬ್ರ, ಮಾಜಿ ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ ಸೇರಿದಂತೆ ಎಲ್ಲಾ ಸದಸ್ಯರುಗಳು, ಸಿಬ್ಬಂದಿ ವರ್ಗ, ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here