ಹೊಸಗದ್ದೆ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

0

ನೆಲ್ಯಾಡಿ: ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.
ಶಾಲಾ ಪ್ರಭಾರ ಮುಖ್ಯಗುರು ವಿದ್ಯಾ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನ ಚರಿತ್ರೆ ಕುರಿತು ಮಾತನಾಡಿದರು.

ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ, ಹಾಡು,ನೃತ್ಯ ನಡೆಯಿತು. ಸಹಶಿಕ್ಷಕಿ ಮಾಲತಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಗೌರವಶಿಕ್ಷಕಿ ಪವಿತ್ರ, ಅತಿಥಿ ಶಿಕ್ಷಕಿಯರಾದ ಚಿತ್ರಾವತಿ, ಪ್ರಭಾ, ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು, ಪೋಷಕರು, ಅಕ್ಷರದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here