ಸುದಾನ ಶಾಲೆಯಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮ ದಿನಾಚರಣೆ

0

ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಮತ್ತು ದೇಶದ ಎರಡನೇ ಪ್ರಧಾನಿ ಶ್ರೀಮಾನ್ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ಭಾವಚಿತ್ರಗಳಿಗೆ ಪುಷ್ಪನಮನವನ್ನು ಸಲ್ಲಿಸುವ ಮೂಲಕ ಆರಂಭವಾದ ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ ಹಾಗೂ ಐಕ್ಯತಾ ಗೀತೆಗಳನ್ನು ಹಾಡುತ್ತಾ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವನಮನವನ್ನು ಸಲ್ಲಿಸಲಾಯಿತು. ಭಗವದ್ಗೀತೆ, ಕುರಾನ್, ಬೈಬಲ್ ಪಠಣ, ಆದಿಪುರಾಣ ಮತ್ತು ಬುದ್ಧ ವಂದನೆಗಳ ಮೂಲಕ ವಿದ್ಯಾರ್ಥಿಗಳು ಸರ್ವಧರ್ಮ ಸಮನ್ವಯದ ಸಂದೇಶವನ್ನು ನೀಡಿದರು. ಈರ್ವರು ನಾಯಕರ ಜೀವನ ಮತ್ತು ಆದರ್ಶಗಳ ಬಗೆಗೆ ವಿವರಿಸುತ್ತಾ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ. ಶೋಭಾ ನಾಗರಾಜ್ ರವರು “ಯುವಜನತೆಯು ಧೀಮಂತ ನಾಯಕರ ಬದುಕಿನಿಂದ ಪ್ರೇರಿತರಾಗಿ ಜಾತಿ, ಧರ್ಮ ಭೇಧವಿಲ್ಲದೆ, ಶುದ್ಧ ಕರ್ಮಗಳೊಂದಿಗೆ ದೇಶದ ಅಭಿವೃದ್ಧಿಯ ಹರಿಕಾರರಾಗಬೇಕು”. ಎಂದು ನುಡಿದರು. ಇದೇ ಸಂದರ್ಭದಲ್ಲಿ ಮಕ್ಕಳಿಗಾಗಿ ರಾಷ್ಟ್ರ ನಾಯಕರ ಚಿತ್ರ ರಚನಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಜೊತೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪರಿಸರ ಸ್ವಚ್ಛತೆಯ ಕಾರ್ಯಕ್ರಮದಲ್ಲಿ ಶಾಲೆ ಹಾಗೂ ಮನೆಗಳಲ್ಲಿ ಪಾಲ್ಗೊಂಡು, ಸ್ವಚ್ಛ ಭಾರತದ ಪ್ರತಿಜ್ಞೆಯನ್ನು ಕೈಗೊಂಡರು. ಉಪಮುಖ್ಯ ಶಿಕ್ಷಕಿ ಲವೀನಾ ನವೀನ್ ಹನ್ಸ್ ಮತ್ತು ಸಂಯೋಜಕರಾದ ಪ್ರತಿಮಾ ಎನ್. ಜಿ, ಗಾಯತ್ರಿ ಹಾಗೂ ಎಲ್ಲಾ ಶಿಕ್ಷಕ ಶಿಕ್ಷಕೇತರರು ಉಪಸ್ಥಿತರಿದ್ದರು. ಶಾಲಾ ಸಹಶಿಕ್ಷಕಿ ಶ್ರೀಮತಿ ಗೀತಾ ಆಚಾರ್ಯ ಮತ್ತು ಶ್ರೀಮತಿ ಜೀವಿತಾ ರೈರವರು ಕಾರ್ಯಕ್ರಮವನ್ನು ನಿರೂಪಿಸಿದರು. ಇದನ್ನು ಶಾಲೆಯ ಸೋಶಿಯಲ್ ಕ್ಲಬ್ ಜಾಗೃತಿ ಮತ್ತು ಸುದಾನ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಆಯೋಜಿಸಿತ್ತು.

LEAVE A REPLY

Please enter your comment!
Please enter your name here