ರಾಮಕುಂಜ ಆ.ಮಾ.ಶಾಲೆಯಲ್ಲಿ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮ ದಿನಾಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಶ್ರೇಷ್ಠ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನೋತ್ಸವವನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.


ಸಂಸ್ಥೆಯ ಕಾರ್ಯದರ್ಶಿ ಸೇಸಪ್ಪ ರೈಯವರು ದೀಪ ಬೆಳಗಿಸಿ, ಪುಷ್ಪಾರ್ಚಣೆಗೈದು, ವಿದ್ಯಾರ್ಥಿಗಳೆಲ್ಲರು ಆದರ್ಶ ಪುರುಷ ಗಾಂಧೀಜಿಯವರ ಗುಣಗಳನ್ನು ಪಾಲನೆ ಮಾಡಬೇಕು, ಜಾತಿ, ಧರ್ಮ, ಮತ, ಪಂಥ ಭೇದ ಮರೆತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ಮರಣೀಯ ಕ್ಷಣಗಳನ್ನು ಶಿಕ್ಷಕರು, ವಿದ್ಯಾರ್ಥಿಗಳು ನೆನಪಿಸಿಕೊಳ್ಳಬೇಕು. ದೇಶ ಮತ್ತು ನೆರೆಹೊರೆಯವರನ್ನು ದ್ವೇಶಿಸದೆ ಬಾಳಬೇಕು. ಗಾಂಧೀಜಿಯವರ ಅಹಿಂಸಾ ಮಾರ್ಗ, ಸತ್ಯಾಗ್ರಹಗಳನ್ನು ಅಳವಡಿಸಿಕೊಂಡು ಅವರು ನಡೆದ ಹೆಜ್ಜೆಗಳಲ್ಲಿ ನಾವು ನಡೆಯಬೇಕೆಂದು ತಿಳಿಸಿದರು.


ಸಹಶಿಕ್ಷಕಿ ಶ್ರೀಮತಿ ನವ್ಯಾರವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ತತ್ತ್ವಾದರ್ಶಗಳ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳಾದ ಚಾಲುಕ್ಯ, ರವಿ ರಂಗನಾಥ್ ಇವರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನದ ಬಗ್ಗೆ ಮಾತನಾಡಿದರು. ಸಂಸ್ಥೆಯ ಎಲ್ಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಸ್ವಚ್ಚತಾ ಆಂದೋಲನ ನಡೆಯಿತು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು ಎನ್ ವಂದಿಸಿದರು. ಸಹಶಿಕ್ಷಕಿ ಚೈತನ್ಯ ಕಾರ್ಯಕ್ರಮ ನಿರೂಪಿಸಿದರು. ಸಿಹಿತಿಂಡಿ ಹಂಚಲಾಯಿತು.

LEAVE A REPLY

Please enter your comment!
Please enter your name here