ಪುತ್ತೂರು: ಬಪ್ಪಳಿಗೆ ಅಂಗನವಾಡಿ ಕೇಂದ್ರದಲ್ಲಿ ಐಸಿಡಿಎಸ್ ದಿನಾಚರಣೆ, ಗಾಂಧೀ ಜಯಂತಿ ಮತ್ತು ಪೌಷ್ಠಿಕ ಸಪ್ತಾಹ ಕಾರ್ಯಕ್ರಮ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಜಲಜಾಕ್ಷಿರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಹಿಳಾ ಸಬಲೀಕರಣಕ್ಕೆ ಅಂಗನವಾಡಿ ಕೇಂದ್ರಗಳು ಭದ್ರ ಬುನಾದಿ. ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಕಾರ್ಯಕರ್ತೆಯರ ಸಾಧನೆ ಅಭಿನಂದಾರ್ಹ ಎಂದರು. ನಗರಸಭಾ ಮಾಜಿ ಸದಸ್ಯೆ ಸ್ವರ್ಣಲತಾ ಹೆಗ್ಡೆ ಶುಭಹಾರೈಸಿದರು. ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ಸದಸ್ಯ ಕೃಷ್ಣಪ್ರಸಾದ್, ಶೌರ್ಯ ತಂಡದ ಸದಸ್ಯೆ ಕಾವ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೊನ್ನಪ್ಪ ಗೌಡ ಉಪಸ್ಥಿತರಿದ್ದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಗಿರಿಜ ಅಧ್ಯಕ್ಷತೆ ವಹಿಸಿದ್ದರು.
ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ಹಾಗೂ ಎಮ್‌ಸಿಬಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ, ನಿವೃತ್ತ ಯೋಧ ನೀಲಪ್ಪ ಗೌಡ ಸಿಂಗಾಣಿ ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿ ಕೊಡುಗೆಯಾಗಿ ನೀಡಿದರು. ಸ್ಥಳೀಯರಾದ ಚಂದ್ರಹಾಸ ಬಪ್ಪಳಿಗೆ, ಸುಲೈಮಾನ್ ಬಪ್ಪಳಿಗೆ ಬಹುಮಾನ ನೀಡಿ ಸಹಕರಿಸಿದ್ದರು. ಬಾಲವಿಕಾಸ ಸಮಿತಿ ಸದಸ್ಯ ಸ್ತ್ರೀಶಕ್ತಿ ಗುಂಪಿನ ಪದಾಧಿಕಾರಿಗಳು, ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ನಳಿನಾಕ್ಷಿ ಸ್ವಾಗತಿಸಿ ಸ್ವರ್ಣಲತ ವಂದಿಸಿದರು. ಅಂಗನವಾಡಿ ಕಾರ್ಯಕರ್ತೆ ಸುಮಿತ್ರಾ ಹರೀಶ್ ಕಾರ್ಯಕ್ರಮ ನಿರೂಪಿಸಿದರು.