ಉಪ್ಪಿನಂಗಡಿ: ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜಯಂತಿಯನ್ನು ಆಚರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಎಮ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್‌ದಾಸ್ ಶೆಟ್ಟಿ, ಉಪಾಧ್ಯಕ್ಷೆ ತೇಜಾವತಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮತ್ತು ಅಧ್ಯಾಪಕ ವೃಂದದವರು ಸೇರಿ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಮುಖ್ಯಗುರು ಜಯಶ್ರೀ ಎಮ್.,ರವರು, ಮಹಾತ್ಮಾಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನ ಚರಿತ್ರೆಯ ಕುರಿತು ತಿಳಿಸಿದರು. ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ, ಹಾಡು, ಭಾಷಣ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನದಾಸ ಬಡಿಲ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಪದ್ಮನಾಭ ಶೆಟ್ಟಿ, ಶರೀಫ್ ಯು.ಟಿ, ಅಬ್ಬಾಸ್, ನಝೀರ್ ಕುವೈತ್, ಅಧ್ಯಾಪಕ ವೃಂದದವರು, ಅಕ್ಷರ ದಾಸೋಹ ಸಿಬಂದಿಗಳು, ಪೋಷಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಶಿಕ್ಷಕಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೆಂಕಟ್ರಮಣ ಭಟ್ ವಂದಿಸಿದರು. ಪದ್ಮನಾಭ ಶೆಟ್ಟಿ ನಡುಬಡಿಲ ಇವರ ವತಿಯಿಂದ ಸಿಹಿತಿಂಡಿ ವಿತರಿಸಲಾಯಿತು.