ಹಿರೆಬಂಡಾಡಿ: ಸರಕಾರಿ ಪ್ರೌಢಶಾಲೆ ಹಿರೇಬಂಡಾಡಿ ಇಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಔಚಿತ್ಯಪೂರ್ಣವಾಗಿ ಆಚರಿಸಲಾಯಿತು.
ಶಾಲಾ ಪರಿಸರದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಂದ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕರಿಂದ ಹಾಗೂ ವಿದ್ಯಾರ್ಥಿಗಳಿಂದ ಸಾಮೂಹಿಕ ಸರ್ವಧರ್ಮ ಭಜನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಎಎಸ್‌ಐ ಸುಬ್ರಾಯ ಗೌಡರವರು ಮಾತನಾಡಿ, ಇಂದಿನ ದಿನದಲ್ಲಿ ಸ್ವಚ್ಛತೆಯ ಅವಶ್ಯಕತೆ ಮತ್ತು ಮಹತ್ವ ಹಾಗೂ ವಿದ್ಯಾರ್ಥಿಗಳು ತಮ್ಮನ್ನು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಮುಖ್ಯ ಶಿಕ್ಷಕರಾದ ಹರಿಕಿರಣ್ ಕೆ.ರವರು ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಜೀವನ ಮೌಲ್ಯಗಳು ಮತ್ತು ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ಭಾರತದ ಉತ್ತಮ ಸತ್ಪ್ರಜೆಗಳಾಗುವಂತೆ ಪ್ರೇರೇಪಿಸಿದರು. ಸಮಾಜ ವಿಜ್ಞಾನ ಶಿಕ್ಷಕಿ ಶ್ರೀಮತಿ ಲಲಿತಾ ಕೆ.ರವರ ಮಾರ್ಗದರ್ಶನದಲ್ಲಿ ಇತಿಹಾಸ ಸಂಘದ ಅಧ್ಯಕ್ಷೆ ನೆಫಿಸತುಲ್ ಮಿಸ್ರಿಯಾ ನೇತೃತ್ವದಲ್ಲಿ ರಚಿಸಿದ ಭಿತ್ತಿ ಪತ್ರಿಕೆ ಅನಾವರಣಗೊಳಿಸಲಾಯಿತು. ಯುವ ಸಂಸತ್ತು ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿನಿಯರಾದ ಸಿಂಚನ, ಬಿ. ಸಮೀಳ, ನೆಬಿಸತುಲ್ ಮಿಸ್ರಿಯ, ಫಾತಿಮತ್ ಝಾಹಿದ ಹಾಗೂ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡ ವಿದ್ಯಾರ್ಥಿನಿ ಪ್ರಿಯಾಂಕರನ್ನು ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು.
ಗಾಂಧಿ ಜಯಂತಿ, ಸ್ವಚ್ಛತಾ ಆಂದೋಲನ, ಸ್ವಚ್ಛತಾ ಹೀ ಸೇವಾ, ಜನಾಗ್ರಹ ತ್ಯಾಜ್ಯನಿರ್ವಹಣೆ ಸಲುವಾಗಿ ಸ್ವಚ್ಛತಾ ಜಾಗೃತಿ ಜಾಥಾ ವಿಜ್ಞಾನ ಶಿಕ್ಷಕರಾದ ಮನೋಹರ ಎಂ ಹಾಗೂ ಸಮಾಜ ವಿಜ್ಞಾನ ಶಿಕ್ಷಕಿ ಶ್ರೀಮತಿ ಲಲಿತ ಕೆ.ರವರ ಮಾರ್ಗದರ್ಶನದಲ್ಲಿ ಸ್ವಚ್ಛತಾ ಘೋಷಣೆಗಳೊಂದಿಗೆ ನಡೆಯಿತು. ಹಿರೆಬಂಡಾಡಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಸದಾನಂದ ಶೆಟ್ಟಿ, ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಸತೀಶ್ ಶೆಟ್ಟಿ ಹೆನ್ನಾಳ, ಎಸ್‌ಡಿಎಂಸಿ ಸದಸ್ಯರಾದ ಶ್ರೀಮತಿ ಇಂದಿರಾ ಮೊದಲಾದವರು ಜಾಥಾದಲ್ಲಿ ಭಾಗವಹಿಸಿದರು.
ವಿದ್ಯಾರ್ಥಿನಿಯರಾದ ಶ್ರುತ ಬಳಗದವರು ಸಭಾ ಕಾರ್ಯಕ್ರಮದಲ್ಲಿ ಪ್ರಾರ್ಥಿಸಿ, ನೆಬಿಸತ್ತುಲ್ ಮಿಸ್ರಿಯಾ ಸ್ವಾಗತಿಸಿ, ವಚನ್ ವಂದಿಸಿದರು. ಬಿ.ಸಮೀಳ ಹಾಗೂ ಫಫಾತಿಮತ್ ಸಹಿದ ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಜೀವನ, ಅವರ ಸಂದೇಶ, ಆದರ್ಶಗಳನ್ನು ಕುರಿತು ಭಾಷಣ ಮಾಡಿದರು. ಕುಮಾರಿ ಗ್ರೇಷ್ಮ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಸೀತಾರಾಮ ಗೌಡ ಬಿ, ಮಲ್ಲಿಕಾ ಐ., ವಸಂತ ಕುಮಾರ್ ಪಿ, ಆರತಿ ವೈ ಸಹಕರಿಸಿದರು.