ತುಂಬೆ: ರಸ್ತೆ ಬದಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಕಾರು ಡಿಕ್ಕಿ

0

ವಿಟ್ಲ: ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ತುಂಬೆ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಪಾಣೆಮಂಗಳೂರು ಕಡೆ ಬರುತ್ತಿದ್ದ ಕಾರೊಂದು ತುಂಬೆ ಸ್ಟೀಲ್ ಅಂಗಡಿಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಸ್ಟೀಲ್ ಅಂಗಡಿಯ ಮಾಲಕರು ಕಾರು ಹಾಗೂ ಅಂಗಡಿಗೆ ಬಂದಿರುವ ಗ್ರಾಹಕರ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ಮೂರು ಕಾರುಗಳು ಜಖಂಗೊಂಡಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಸಂಚಾರಿ ಠಾಣಾ ಪೋಲಿಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ‌.

LEAVE A REPLY

Please enter your comment!
Please enter your name here