ಕುಟ್ರುಪಾಡಿ ಗ್ರಾ.ಪಂ.ನಲ್ಲಿ ಸ್ವಚ್ಚತಾ ಕಾರ್ಯಕ್ರಮ

0

ಕಡಬ: ಸ್ವಚ್ಚತಾ ಹಿ ಸೇವಾ ಕಾರ್ಯಕ್ರಮದ ಅಂಗವಾಗಿ ಕುಟ್ರುಪಾಡಿ ಮತ್ತು ಬಲ್ಯ ಗ್ರಾಮದಲ್ಲಿ ಬೃಹತ್ ಸ್ವಚ್ಚತಾ ಕಾರ್ಯಕ್ರಮವನ್ನು ಕುಟ್ರುಪಾಡಿ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಸಲಾಯಿತು.
ಗ್ರಾಮಸ್ಥರು ಸ್ವಯಂ ಪ್ರೇರಣೆಯಿಂದ ಈ ಸ್ವಚ್ಛತಾ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. ಅಲ್ಲದೇ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸದಸ್ಯರು, ಜನನಿ ಪ್ರೆಂಡ್ಸ್ ಕ್ಲಬ್, ಆದರ್ಶ ಸ್ಪೋರ್ಟ್ಸ್ ಕ್ಲಬ್, ಓಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಘಟ ಸಮಿತಿ ಹೊಸ್ಮಠ, ಚಾಲಕ ಮಾಲಕರು ಹೊಸ್ಮಠ-ಬಲ್ಯ, ಪೃಥ್ವಿ ಸಂಜೀವಿನಿ ಒಕ್ಕೂಟ ಕುಟ್ರುಪಾಡಿ, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ ಕಾಯಕರ್ತೆಯರು, ಆಶಾ ಕಾರ್ಯಕರ್ತೆಯರು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು. ಬಳಿಕ ಗ್ರಾಮ ಆರೋಗ್ಯ ಅಭಿಯಾನದಡಿಯಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು.

LEAVE A REPLY

Please enter your comment!
Please enter your name here