ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಹಳದಿಪುರ ಮಠದ ಶ್ರೀ ಶ್ರೀ ವಾಮನಾಶ್ರಮ ಸ್ವಾಮೀಜಿ ಭೇಟಿ

0

ಕಡಬ : ಉತ್ತರ ಕನ್ನಡ ಜಿಲ್ಲೆಯ ಹಳದಿಪುರ ಮಠದ ಶ್ರೀ ಶ್ರೀ ವಾಮನಾಶ್ರಮ ಸ್ವಾಮೀಜಿ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯ ಅವರು ದೇವರ ಪ್ರಸಾದ ಹಾಗೂ ಫಲಪುಷ್ಪಗಳನ್ನು ನೀಡಿದರು. ನಂತರ ಹೊರಾಂಗಣದಲ್ಲಿರುವ ಹೊಸಳಿಗಮ್ಮ ಗುಡಿಯ ಬಳಿ ದೈವದ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಅವರೊಂದಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ವನಜಾ ವಿ. ಭಟ್, ಶೋಭಾ ಗಿರಿಧರ್, ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ|ನಿಂಗಯ್ಯ ಶಿಷ್ಟಾಚಾರ ವಿಭಾಗದವರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here