ನಾಳೆ(ಅ.5) ಪುಣಚ ಗ್ರಾಪಂ ಜಮಾಬಂದಿ ಸಭೆ

0

ಪುತ್ತೂರು: ಪುಣಚ ಗ್ರಾಮ ಪಂಚಾಯತ್‌ನ 2022-23 ನೇ ಸಾಲಿನ ಜಮಾಬಂದಿ ಸಭೆಯು ಅ.5 ರಂದು ಬೆಳಿಗ್ಗೆ ಗ್ರಾಪಂ ಸಭಾಂಗಣದಲ್ಲಿ ನಡೆಯಲಿದೆ. ಗ್ರಾಪಂ ಅಧ್ಯಕ್ಷೆ ಯಶೋಧಾ ಯಾನೆ ಬೇಬಿರವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರು ನೊಡೇಲ್ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ಗ್ರಾಮದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆ ನೀಡಿ ಸಹಕರಿಸುವಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ರವಿ, ದ್ವಿತೀಯ ದರ್ಜೆ ಲೆಕ್ಕಸಹಾಯಕಿ ಪಾರ್ವತಿ ಕೆ, ಗ್ರಾಪಂ ಅಧ್ಯಕ್ಷೆ ಯಶೋಧಾ ಯಾನೆ ಬೇಬಿ, ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here