ವಿವೇಕಾನಂದ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿನಿ ಕಥಾಕಥನ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು: ತೆಲಂಗಾಣದ ವಿಜಯವಾಡದಲ್ಲಿ ಅ.1 ಮತ್ತು2ರಂದು ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯಕ್ಷೇತ್ರೀಯ ಗಣಿತ ವಿಜ್ಞಾನ – ಸಂಸ್ಕೃತಿ ಮಹೋತ್ಸವದ ಕಥಾಕಥನ ಸ್ಪರ್ಧೆಯಲ್ಲಿ ನೆಹರು ನಗರ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 8ನೇ ತರಗತಿ ವಿದ್ಯಾರ್ಥಿನಿ ಆಪ್ತ ಚಂದ್ರಮತಿ ಮುಳಿಯ ಪ್ರಥಮ ಸ್ಥಾನ ಪಡೆದು ಮಥುರಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಕೇಶವ ಪ್ರಸಾದ್ ಮುಳಿಯ ಮತ್ತು ಕೃಷ್ಣವೇಣಿ ಮುಳಿಯ ದಂಪತಿ ಪುತ್ರಿ.

ಪ್ರಸ್ತುತ ಮಹೋತ್ಸವದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ಚಿರಾಗ್, ಆಕಾಂಕ್ಷ್ ಮತ್ತು 9 ನೇ ತರಗತಿಯ ಅನೀಶ್ ಇವರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನ ಹಾಗೂ ಮೂರ್ತಿ ರಚನಾ ಸ್ಪರ್ಧೆಯಲ್ಲಿ 9ನೇ ತರಗತಿಯ ಸಂಚಯ್ ದ್ವಿತೀಯ ಸ್ಥಾನ ಗಳಿಸಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here