ಸಂತ ಫಿಲೋಮಿನಾ ಕಾಲೇಜಿನಲ್ಲಿ ನಾಳೆ(ಅ.5) ಐಸಿಐಸಿಐ ಬ್ಯಾಂಕ್‌ನಿಂದ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ

0

ಪುತ್ತೂರು : ಸಂತ ಸಂತ ಫಿಲೋಮಿನಾ ಕಾಲೇಜಿನ ಟ್ರೈನಿಂಗ್ ಅಂಡ್ ಪ್ಲೇಸ್‌ಮೆಂಟ್ ಸೆಲ್ ಹಾಗೂ ಐಸಿಐಸಿಐ ಬ್ಯಾಂಕ್‌ನ ಸಹಯೋಗದೊಂದಿಗೆ ಅ.5ರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನ ಸ್ಪಂದನ ಸಭಾಂಗಣದಲ್ಲಿ ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗಾಗಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮವು ನಡೆಯಲಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಐಸಿಐಸಿಐ ಬ್ಯಾಂಕ್ ವತಿಯಿಂದ 21 ದಿನಗಳ ಕಡ್ಡಾಯ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತದೆ. ಯಾವುದೇ ಪದವಿ ಹೊಂದಿದ್ದು ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಶೇಖಡಾ 50 ಕ್ಕಿಂತ ಮೇಲ್ಪಟ್ಟ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here