ಗಾಂಧೀಜಿಯವರ ಸರಳ ಜೀವನ, ತತ್ವಗಳು, ವಿಚಾರಗಳನ್ನು ತಿಳಿದುಕೊಂಡು ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನಗಳು ನಡೆಯಬೇಕು’ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಗಾಂಧೀಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲೆಯ ಹಿರಿಯ ಪೋಷಕರೂ, ನಿವೃತ್ತ ಪ್ರಾಚಾರ್ಯರೂ ಆಗಿರುವ ಶ್ರೀ ಗೋಪಾಲಕೃಷ್ಣ ಉಪಾಧ್ಯಾಯರು ನುಡಿದರು. ಸಭಾ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರಮೇಶ್ಚಂದ್ರ ಅವರು ಲಾಲ್ ಬಹದ್ದೂರ್ ಶಾಸ್ತ್ರೀಯವರ ಜೀವನದಲ್ಲಿ ನಡೆದಂತಹ ಕೆಲವು ಘಟನೆಗಳು ಮತ್ತು ಅವರ ಸರಳತೆ, ನುಡಿದಂತೆ ನಡೆಯುವ ವ್ಯಕ್ತಿತ್ವ ಜವಾಬ್ದಾರಿಗಳನ್ನು ನಿಭಾಯಿಸಿದ ರೀತಿ ‘ಬಹದ್ದೂರ್’ ಎಂಬ ಹೆಸರಿಗೆ ತಕ್ಕ ಹಾಗೆ ಇರುವ ಆದರ್ಶ ವಿಚಾರಗಳನ್ನು ಪ್ರಸ್ತುತ ಪಡಿಸಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಸಂಚಾಲಕರಾದ ವಸಂತ ಸುವರ್ಣ, ಖಜಾಂಚಿ ಅಶೋಕ್ ಕುಂಬ್ಳೆ, ಶಾಲಾ ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆ ಮತ್ತು ನಳಿನಿ ವಾಗ್ಲೆ ಉಪಸ್ಥಿತರಿದ್ದರು. ಶ್ರೀಮತಿ ಶ್ವೇತಾ ಮಾತಾಜಿ ಮತ್ತು ಪೂರ್ಣಿಮಾ ಮಾತಾಜಿಯವರ ‘ವೈಷ್ಣವ ಜನತೋ’ ಹಾಡಿನೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಶ್ರೀಮತಿ ಸೌಮ್ಯ ಸ್ವಾಗತಿಸಿ, ಶ್ರೀಮತಿ ಶ್ರೀಲತಾ ವಂದಿಸಿ, ಶ್ರೀಮತಿ ಗೀತಾ ಕಾರ್ಯಕ್ರಮ ನಿರೂಪಿಸಿದರು.