ಬೆಳ್ಳಾರೆ:2022ರ ಜುಲೈ 26ರಂದು ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬAಧಿಸಿ ನ್ಯಾಯಾಂಗ ಬಂಧನದಲ್ಲಿರುವ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಎಚ್.ಬಿ.ಪ್ರಭಾಕರ್ ಶಾಸ್ತಿç ಅನಿಲ್ ಕೆ.ಕಟ್ಟಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ.ಪ್ರವೀಣ್ ನೆಟ್ಟಾರು ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದ ಆರೋಪಿಗಳಾಗಿರುವ ಕೆ.ಇಸ್ಮಾಯಿಲ್ ಶಫಿ(ಆರೋಪಿ ನಂ.9),ಕೆ.ಮೊಹಮ್ಮದ್ ಇಕ್ವಾಲ್ (ಆರೋಪಿ ನಂ.10) ಹಾಗೂ ಎಂ.ಶಾಹೀದ್(ಆರೋಪಿ ನಂ.11)ಅವರು ಜಾಮೀನಿನಲ್ಲಿ ಬಿಡುಗಡೆ ಕೋರಿ ರಾಜ್ಯ ಉಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಜಾಮೀನಿಗೆ ಅರ್ಜಿ ಸಲ್ಲಿಸಿರುವ ಆರೋಪಿಗಳು ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸಿರುವುದನ್ನು ತೋರಿಸಲು ಸೂಕ್ತ ಸಾಕ್ಷ÷್ಯಧಾರಗಳು ಲಭ್ಯವಿದೆ.ಪ್ರವೀಣ್ ನೆಟ್ಟಾರು ಮೇಲೆ ದಾಳಿ ನಡೆದ ವೇಳೆ ಈ ಮೂವರು ಆರೋಪಿಗಳು ಸ್ಥಳದಲ್ಲಿ ಹಾಜರಿರಲಿಲ್ಲವಾದರೂ ಪ್ರವೀಣ್ ನೆಟ್ಟಾರು ಹತ್ಯೆಗೆ ಯೋಜನೆ ರೂಪಿಸಲು ಹಮ್ಮಿಕೊಂಡಿದ್ದ ಸಂಚಿನ ಸಭೆಯಲ್ಲಿ ಭಾಗವಹಿಸಿದ್ದರು ಹಾಗೂ ಹತ್ಯೆ ಯೋಜನೆ ಬಗ್ಗೆ ಚರ್ಚಿಸಿದ್ದರು.ಸಂಚು ರೂಪಿಸಲು ಬಹಿರಂಗವಾಗಿ ಕಾಣಿಸಬೇಕೇಂದೇನೂ ಇಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.ನಾಲ್ವರು ಸಾಕ್ಷಿಗಳ ಹೇಳಿಕೆ ಪ್ರಕಾರ, ಆರೋಪಿಗಳು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.ತನಿಖಾಧಿಕಾರಿಗಳು ಸಂಗ್ರಹಿಸಿರುವ ಆರೋಪಿಗಳ ಫೋನ್ ಕರೆಗಳ ವಿವರಗಳು ಸಹ ಪ್ರಕರಣದಲ್ಲಿ ಈ ಮೂವರು ಆರೋಪಿಗಳು ಪಿತೂರಿ ನಡೆಸಿರುವುದನ್ನು ತೋರಿಸುತ್ತದೆ.ಆರೋಪಿಗಳು ಪ್ರಕರಣದಲ್ಲಿ ನಿರ್ದಿಷ್ಟ,ಸಕ್ರಿಯ ಮತ್ತು ಗಮನಾರ್ಹ ಪಾತ್ರ ನಿರ್ವಹಿಸಿರುವುದನ್ನು ಮೇಲ್ನೋಟಕ್ಕೆ ದೃಢಪಡಿಸುವ ಸಾಕ್ಷ÷್ಯಗಳು ನ್ಯಾಯಾಲಯದ ಮುಂದಿದೆ.ಮೇಲ್ಮನವಿದಾರ ಆರೋಪಿಗಳು ಪ್ರವೀಣ್ ನೆಟ್ಟಾರು ಹತ್ಯೆಯ ಪಿತೂರಿಯಲ್ಲಿ ಭಾಗವಹಿಸಿರುವುದು ಸತ್ಯವಾಗಿದ್ದು, ಅದು ಭಯೋತ್ಪಾದಕ ಕೃತ್ಯವನ್ನು ಸಮರ್ಥಿಸುವ, ಪ್ರೋತ್ಸಾಹಿಸುವ ಕೆಲಸವಾಗಿದೆ.ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ ಅಡಿ (ಯುಎಪಿಎ) ಆರೋಪಿಗಳು ನಡೆಸಿರುವ ಕೃತ್ಯವು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದ ಪೀಠ, ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
Home Uncategorized ಪ್ರವೀಣ್ ನೆಟ್ಟಾರು ಹತ್ಯೆ ಸಂಚಿನಲ್ಲಿ ಭಾಗಿಯಾಗಿದ್ದ ಆರೋಪಿತ್ರಯರ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್