ಪೆರಾಬೆ ಗ್ರಾ.ಪಂ.ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಪೆರಾಬೆ: ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಡಿ ಪೆರಾಬೆ ಗ್ರಾ.ಪಂ.ವತಿಯಿಂದ ಅ.1ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


ಪೆರಾಬೆ ಗ್ರಾ.ಪಂ.ಕಚೇರಿ ಆವರಣ, ಆರೋಗ್ಯ ಉಪಕೇಂದ್ರ ಆವರಣ ಹಾಗೂ ರಾಜ್ಯ ಹೆದ್ದಾರಿಯ ಬದಿಗಳಲ್ಲಿ ಸ್ವಚ್ಛತೆ ಮಾಡಲಾಯಿತು. ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಕುಂತೂರುಪದವು ಕುಮಾರಧಾರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here