ಅ.7: ಬೆಟ್ಟಂಪಾಡಿಯಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಕ್ರೀಡಾ ಕೂಟ

0

ನಿಡ್ಪಳ್ಳಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಪುತ್ತೂರು ಹಾಗೂ ಸರಕಾರಿ ಪ್ರೌಢಶಾಲೆ ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ವಲಯ ಮಟ್ಟದ ಕ್ರೀಡಾ ಕೂಟ ಬಿಲ್ವಗಿರಿ ಕ್ರೀಡಾ ಹಬ್ಬ- 2023-24 ಅ.7ರಂದು ಬೆಟ್ಟಂಪಾಡಿ ಬಿಲ್ವಗಿರಿಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಬೆಳಿಗ್ಗೆ ಗಂಟೆ 9ರಿಂದ ಆರಂಭವಾಗುವ ಕ್ರೀಡಾ ಕೂಟವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿರುವರು. ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಹಲವಾರು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

ಸಂಜೆ ಸಮಾರೋಪ ಸಮಾರಂಭ: ಸಂಜೆ ಗಂಟೆ 4.30 ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಸುರೇಶ್ ವಹಿಸಲಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ  ಹಲವಾರು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಶಾಲಾ ಮುಖ್ಯ ಗುರು ವಿಜಯ ಕುಮಾರ್. ಎಂ ಹಾಗೂ ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here