ಕಡಬ: ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಪ್ರದೇಶದಲ್ಲಿ ಕಳೆದ ಕೆಲವು ಸಮಯಗಳಿಂದ ಸಾಕು ಪ್ರಾಣಿಗಳನ್ನು ಮೇಯಲು ಬಿಡುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆ ಉಂಟಾಗುವ ಹಿನ್ನೆಲೆಯಲ್ಲಿ ಅಂತಹ ಸಾಕುಪ್ರಾಣಿಗಳನ್ನು ವಶಕ್ಕೆ ಪಡೆದು ಮಾಲಕರಿಗೆ ದಂಡ ವಿಧಿಸುವ ಬಗ್ಗೆ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ತಮ್ಮ ಮನೆಯಲ್ಲಿ ಸಾಕುತ್ತಿರುವ ಆಡು, ದನ, ಕರುಗಳನ್ನು ಬೇರೆಯವರ ಸ್ಥಳದಲ್ಲಿ ಸಾರ್ವಜನಿಕ ಪ್ರದೇಶ, ರಸ್ತೆಗಳಲ್ಲಿ ಮೇವುಗೆ ಬಿಡುತ್ತಿದ್ದು ಹಾಗೂ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳಿಗೆ ಕಟ್ಟುತ್ತಿರುವುದು ಪಟ್ಟಣ ಪಂಚಾಯತ್ ಗಮನಕ್ಕೆ ಬಂದಿರುತ್ತದೆ. ಅಲ್ಲದೆ ಈ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದಿರುತ್ತದೆ. ಇದರಿಂದ ಬೇರೆಯವರ ಕೃಷಿಗೆ ಹಾನಿವುಂಟಾಗುತ್ತಿದ್ದು ಅಲ್ಲದೆ ರಸ್ತೆಗೆ ಬಿಡುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ ಹಾಗೂ ರಸ್ತೆ ಅಪಘಾತವಾಗುವ ಸಾಧ್ಯತೆ ಇರುವುದರಿಂದ ಕಡಬ ಪಟ್ಟಣ ಪಂಚಾಯತ್‌ನ ವ್ಯಾಪ್ತಿಯಲ್ಲಿ ಸಾಕು ಪ್ರಾಣಿಗಳು ಕಂಡು ಬಂದರೆ, ಅಂತಹ ಪ್ರಾಣಿಗಳನ್ನು ಬಂಧಿಸಿ, ಅದರ ವಾರಸುದಾರರಿಗೆ ದಂಡ ವಿಧಿಸಲಾಗುವುದು ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪಕೀರ ಮೂಲ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.