





ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿ ಡ್ರಮ್ , ಬಕೇಟ್ ಸಹಿತ ಹಲವು ಚಿಲ್ಲರೆ ಸೊತ್ತು ಕದಿಯುತ್ತಿದ್ದಾತನನ್ನು ಶಾಲಾ ಶಿಕ್ಷಕರೆ ಹಿಡಿದ ಘಟನೆ ಅ.5 ರಂದು ನಡೆದಿದೆ.


ಪುತ್ತೂರು ಕೊಂಬೆಟ್ಟು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀರು ಕುಡಿಯಲು ಇಟ್ಟಿದ್ದ ಡ್ರಮ್ ಮತ್ತು ಇತರ ಸ್ಟೀಲ್ ಮತ್ತು ಪ್ಲಾಸ್ಟಿಕ್ ಸೊತ್ತುಗಳು ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿತ್ತು. ಈ ಕುರಿತು ಶಾಲೆಯ ಉಪಪ್ರಾಂಶುಪಾಲ ಸಿ ಸಿ ಟಿ ವಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಸ್ಟೀಲ್ ಡ್ರಮ್ ಅನ್ನು ಶಾಲೆಯಿಂದ ಕಳವು ಮಾಡುವುದು ಬೆಳಕಿಗೆ ಬಂದಿತ್ತು. ಈ ಕುರಿತು ಶಾಲೆಯ ಶಿಕ್ಷಕರಿಗೆ, ಎಸ್ ಡಿ ಎಮ್ ಸಿ ಮತ್ತು ನಗರಸಭಾ ಸ್ಥಳೀಯ ಸದಸ್ಯರಿಗೆ, ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಅ.5 ರಂದು ಸ್ಟೀಲ್ ಡ್ರಮ್ ಕದ್ದೊಯ್ದ ವ್ಯಕ್ತಿ ಶಾಲೆಯ ಆವರಣದಲ್ಲಿ ಕಾಣುತ್ತಿದ್ದಂತೆ ಉಪಪ್ರಾಂಶುಪಾಲರು ಮತ್ತು ಶಿಕ್ಷಕರು ಆತನನ್ನು ಹಿಡಿದಿದ್ದಾರೆ. ಹಿಂದಿ ಭಾಷೆಯಲ್ಲಿ ಮಾತನಾಡುತ್ತಿರುವ ಕಳ್ಳ ಉತ್ತರಪ್ರದೇಶ
ಮೂಲದವನ್ನೆಲಾಗಿದೆ. ಪೊಲೀಸರು ಶಾಲೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.













