ದ.ಕ.ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಅಹ್ವಾನ-ಅ.25 ರಂದು ಕೊನೆಯ ದಿನ 

0

ಮಂಗಳೂರು : 2023-24ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು ಸಮಾಜ ಸೇವೆ, ಜನಪದ, ಪರಿಸರ-ವಿಜ್ಞಾನ, ವೈದ್ಯಕೀಯ ಸಂಶೋಧನೆ, ಪತ್ರಿಕೋದ್ಯಮ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ತಮ್ಮ ಸೇವೆ ಅಥವಾ ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ ವಿವರಣೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಪ್ರಶಸ್ತಿಗೆ ವಿವರಣೆಗಳೊಂದಿಗೆ ಅರ್ಜಿಯನ್ನು  ಅ. 25ರಂದು ಸಂಜೆ 5 ಗಂಟೆಯೊಳಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here