ಅ.8:ಡೊನ್ ಬೊಸ್ಕೊ ಕ್ಲಬ್‌ನಿಂದ ಪ್ರತಿಭಾ ಪುರಸ್ಕಾರ

0

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಡೊನ್ ಬೊಸ್ಕೊ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರಿನ ವಿದ್ಯಾರ್ಥಿ ಸಾಧಕರನ್ನು ಮತ್ತು ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಬೆಂಬಲಿಸುವ ‘ಪ್ರತಿಭಾ ಪುರಸ್ಕಾರ-2023’ ಕಾರ್ಯಕ್ರಮವು ಅ.8 ರಂದು ಮಾಯಿದೆ ದೇವುಸ್ ಚರ್ಚ್ ಸಭಾಭವನದಲ್ಲಿ ಪೂರ್ವಾಹ್ನ ನಡೆಯಲಿದೆ.
ಮುಖ್ಯ ಅತಿಥಿಯಾಗಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ, ಗೌರವ ಉಪಸ್ಥಿತಿಯಾಗಿ ಮಾಯಿದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರು ವಂ|ಲಾರೆನ್ಸ್ ಮಸ್ಕರೇನ್ಹಸ್‌ರವರು ಭಾಗವಹಿಸಲಿರುವರು. ಅಧ್ಯಕ್ಷತೆಯನ್ನು ಡೊನ್ ಬೊಸ್ಕೊ ಕ್ಲಬ್ ಅಧ್ಯಕ್ಷ ಆಂಟನಿ ಒಲಿವೆರಾ ವಹಿಸಲಿದ್ದಾರೆ ಎಂದು ಡೊನ್ ಬೊಸ್ಕೊ ಕ್ಲಬ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here