ಸವಣೂರು : ಪುಣ್ಚಪ್ಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸವಣೂರು ವಲಯದ ಪುಣ್ಚಪಾಡಿ ಕಾರ್ಯಕ್ಷೇತ್ರದ ವತಿಯಿಂದ ಶಾಲಾ ಪರಿಸರ ಸಂರಕ್ಷಣೆ ಹಾಗೂ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮವು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕಿ ರಶ್ಮಿತಾ ವಹಿಸಿದ್ದರು.ಕಾರ್ಯಕ್ರಮವನ್ನು ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ಗಿರಿಶಂಕರ ಸುಲಾಯ ಅವರು ಉಧ್ಘಾಟಿಸಿದರು.
ಕಡಬ ತಾಲೂಕು ಕೃಷಿಮೇಲ್ವೀಚಾರಕ ಸೋಮೇಶ್ ಪರಿಸರ ಸಂರಕ್ಷಣೆ ಕುರಿತು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಗಿರೀಶಂಕರ್ ಸುಲಾಯ ಅವರು ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.ಪುಣ್ಚಪಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯಾದ ಅಮಿತ್ ಕಾರ್ಯಕ್ರಮ ನಿರೂಪಿಸಿದರು. ಸವಣೂರು ಕಾರ್ಯಕ್ಷೇತ್ರದ ಮೀನಾಕ್ಷಿ ಸ್ವಾಗತಿಸಿದರು.ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಿ ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು.