ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪೋಷಕರ ಸಭೆ

0

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ನಡೆಸಲಾಯಿತು.
ಸಭಾಧ್ಯಕ್ಷತೆಯನ್ನು ವಹಿಸಿದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ. ಬಿ ಮಾತನಾಡಿ, ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಜವಾಬ್ದಾರಿ ಎಷ್ಟಿದೆಯೋ ಅಷ್ಟೇ ಜವಾಬ್ದಾರಿ ಪೋಷಕರ ಮೇಲಿದೆ. ಆದ್ದರಿಂದ ಪ್ರತಿಯೊಂದು ಪೋಷಕರು ಕೂಡ ತಮ್ಮ ಮಕ್ಕಳ ಕಲಿಕೆಯ ಬಗ್ಗೆ ಕಾಳಜಿಯೊಂದಿಗೆ ಅವರ ಆಗುಹೋಗುಗಳನ್ನು ಗಮನಿಸಬೇಕು ಎಂದರು. ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ ಅವರು ಮಾತನಾಡಿ, ಮಕ್ಕಳ ಫಲಿತಾಂಶವನ್ನು ಹೆಚ್ಚಿಸುವಲ್ಲಿ ಪೋಷಕರು ಕೂಡ ಶಿಕ್ಷಕರೊಂದಿಗೆ ಸಹಕರಿಸಬೇಕು ಎಂದು ಕೇಳಿಕೊಂಡರು. ಮುಖ್ಯಗುರು ಸರಸ್ವತಿರವರು,ಎಸ್ ಎಸ್ ಎಲ್ ಸಿ ಪರೀಕ್ಷಾ ಪದ್ಧತಿ, ಪರೀಕ್ಷಾ ತಯಾರಿ ಮತ್ತು ಫಲಿತಾಂಶವನ್ನು ಹೆಚ್ಚಿಸುವ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ವಿವರಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಹಿರಿಯ ಶಿಕ್ಷಕಿ ಹೇಮನಾಗೇಶ್ ರೈ ಮತ್ತು ಎಲ್ಲಾ ವಿಷಯವಾರು ಶಿಕ್ಷಕರು ಉಪಸ್ಥಿತರಿದ್ದರು. ವಿನಯ ವಿ. ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಅನಿತಾ ಜೆ. ರೈ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here