ಪುತ್ತೂರು: ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಪುತ್ತೂರು ತಾಲೂಕು ಸಮಿತಿಯಿಂದ ಬೃಹತ್ ಮೌಲೀದ್ ಮಜ್ಲಿಸ್ ಕಾರ್ಯಕ್ರಮ ಪುತ್ತೂರು ಬದ್ರಿಯಾ ಮಸೀದಿ ಸಭಾಂಗಣದಲ್ಲಿ ನಡೆಯಿತು.
ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಅಸೈಯದ್ ಅಹಮದ್ ಪೂಕೋಯ ತಂಙಳ್ ನೇತೃತ್ವ ವಹಿಸಿ ದುವಾಶೀರ್ವಚನ ನೀಡಿ ಮಿಲಾದುನ್ನೆಬಿಯ ಮಹತ್ವದ ಬಗ್ಗೆ ವಿವರಿಸಿದರು.ಯಾಹ್ಯಾ ತಂಙಳ್ ಪೋಳ್ಯ,ಪುತ್ತೂರು ಬದ್ರಿಯಾ ಮಸೀದಿಯ ಖತೀಬ್ ಅಬ್ಬಾಸ್ ಫೈಝಿ ಪುತ್ತಿಗೆ,ಪುತ್ತೂರು ಸಾಲ್ಮರ ಸೈಯದ್ ಮಲೆ ಮಸೀದಿಯ ಖತೀಬ್ ಉಮ್ಮರ್ ದಾರಿಮಿ, ಅಬ್ಬಾಸ್ ಮದನಿ ಮೊಟ್ಟೆತ್ತಡ್ಕ, ಉಮ್ಮರ್ ಫೈಝಿ ಸಾಲ್ಮರ, ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಎಲ್ ಟಿ ಅಬ್ದುಲ್ ರಝಾಕ್ ಹಾಜಿ, ಪ್ರಧಾನ ಕಾರ್ಯದರ್ಶಿ ಯಾಕೂಬ್ ಖಾನ್ ಬಪ್ಪಳಿಗೆ ಮೊದಲಾದರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಮೀಯ್ಯತ್ತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ದಾರಿಮಿ ಸಂಪ್ಯ ಸ್ವಾಗತಿಸಿದರು. ಮೌಲೀದ್ ಮಜ್ಲಿಸ್ ಕಾರ್ಯಕ್ರಮದಲ್ಲಿ ಜಂ ಇಯ್ಯತುಲ್ ಉಲಾಮಾದ ಪದಾಧಿಕಾರಿಗಳಾದ ಉಮರ್ ಮುಸ್ಲಿಯಾರ್ ನಂಜೆ, ಸಿರಾಜುದ್ದೀನ್ ಫೈಝಿ ಬಪ್ಪಳಿಗೆ,ರಶೀದ್ ರಹ್ಮಾನಿ ಪರ್ಲಡ್ಕ, ಅಝೀಝ್ ದಾರಿಮಿ ಕೊಡಾಜೆ, ಸಿದ್ದೀಕ್ ಫೈಝಿ ಮುಕ್ರಂಪಾಡಿ,ಶಾಫಿ ಇರ್ಫಾನಿ ಕಲ್ಲೆಗ, ಆಸಿಫ್ ಅಝ್ಹರಿ ಇರ್ದೆ ಮತ್ತಿತರರು ಉಪಸ್ಥಿತರಿದ್ದರು.