ಬೆಟ್ಟಂಪಾಡಿಯಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಕ್ರೀಡಾ ಕೂಟ

0

ನಿಡ್ಪಳ್ಳಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಹಾಗೂ ಸರಕಾರಿ ಪ್ರೌಢಶಾಲೆ ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ಕ್ರೀಡಾ ಕೂಟ ಬಿಲ್ವಗಿರಿ ಕ್ರೀಡಾ ಹಬ್ಬ- 2023 ಅ.7 ರಂದು ಬೆಟ್ಟಂಪಾಡಿ ಬಿಲ್ವಗಿರಿಯ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾ ಕೂಟವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಉದ್ಘಾಟಿಸಿದರು. ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.


ಪ್ರಾಥಮಿಕ ಶಾಲಾ ವಿಭಾಗದ ಬಾಲಕರ ವಿಭಾಗದಲ್ಲಿ ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಕಾವು ಪ್ರಥಮ ಸಮಗ್ರ ತಂಡ ಪ್ರಶಸ್ತಿ ಪಡೆದು ಕೊಂಡರೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಪಾಣಾಜೆ ದ್ವಿತೀಯ ಸಮಗ್ರ ತಂಡ ಪ್ರಶಸ್ತಿ ಪಡೆದು ಕೊಂಡಿತು.
ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ಲಂಪಾಡಿ ಪ್ರಥಮ ಸಮಗ್ರ ತಂಡ ಪ್ರಶಸ್ತಿ ಪಡೆದು ಕೊಂಡರೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕಾವು ದ್ವಿತೀಯ ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿತು.
8ನೇ ತರಗತಿ ವಿಭಾಗದ ಬಾಲಕರ ವಿಭಾಗದಲ್ಲಿ ಬುಶ್ರಾ ಆಂಗ್ಲ ಮಾದ್ಯಮ ಶಾಲೆ ಕಾವು ಪ್ರಥಮ ಸಮಗ್ರ ತಂಡ ಪ್ರಶಸ್ತಿ ಪಡೆದು ಕೊಂಡಿದೆ. ಪಂಚಲಿಂಗೇಶ್ವರ ಪ್ರಾಥಮಿಕ ಶಾಲೆ ಈಶ್ವರಮಂಗಲ ದ್ವಿತೀಯ ಸಮಗ್ರ ತಂಡ ಪ್ರಶಸ್ತಿ ಪಡೆದು ಕೊಂಡಿದೆ. ಬಾಲಕಿಯರ ವಿಭಾಗದಲ್ಲಿ ಗಜಾನನ ಆಂಗ್ಲ ಮಾದ್ಯಮ ಶಾಲೆ ಈಶ್ವರಮಂಗಲ ಪ್ರಥಮ ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿದ್ದು, ಪ್ರಿಯದರ್ಶಿನಿ ಆಂಗ್ಲ ಮಾದ್ಯಮ ಶಾಲೆ ಬೆಟ್ಟಂಪಾಡಿ ದ್ವಿತೀಯ ತಂಡ ಪ್ರಶಸ್ತಿ ಪಡೆದುಕೊಂಡಿದೆ.
17 ರ ವಯೋಮಾನದ ಬಾಲಕರ ವಿಭಾಗದಲ್ಲಿ ಷಣ್ಮುಖ ದೇವ ಪ್ರೌಢಶಾಲೆ ಪೆರ್ಲಂಪಾಡಿ ಪ್ರಥಮ ತಂಡ ಪ್ರಶಸ್ತಿ ಪಡೆದು ಕೊಂಡಿದೆ. ಸರಕಾರಿ ಪ್ರೌಢಶಾಲೆ ಪಾಪೆಮಜಲು ದ್ವಿತೀಯ ತಂಡ ಪ್ರಶಸ್ತಿ ಪಡೆದುಕೊಂಡಿದೆ. ಬಾಲಕಿಯರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ನೆಟ್ಟಣಿಗೆ ಮುಡ್ನೂರು ಪ್ರಥಮ ಪ್ರಶಸ್ತಿ ‌ಪಡೆದುಕೊಂಡಿದ್ದು, ಸರ್ವೋದಯ ಪ್ರೌಢಶಾಲೆ ಸುಳ್ಯಪದವು ದ್ವಿತೀಯ ತಂಡ ಪ್ರಶಸ್ತಿ ಪಡೆದುಕೊಂಡಿದೆ.

ಪ್ರಾಥಮಿಕ ಶಾಲಾ ವಿಭಾಗದ ಬಾಲಕರ ವಿಭಾಗದಲ್ಲಿ ಪಾಣಾಜೆ ಶಾಲೆಯ ಮಹಮ್ಮದ್ ಮಿದಿಲಾಜ್ ಮತ್ತು ಕಾವು ಬುಶ್ರಾ ವಿದ್ಯಾಸಂಸ್ಥೆಯ ಮಿತೇಶ್ ನಾಯ್ಕ ವೈಯಕ್ತಿಕ ಚಾಂಪಿಯನ್‌ ಶಿಪ್ ಪಡೆದುಕೊಂಡರು.
ಬಾಲಕಿಯರ ವಿಭಾಗದಲ್ಲಿ ಪೆರ್ಲಂಪಾಡಿ ಶಾಲೆಯ ಫಾತಿಮತ್ ಶೈಮಾ ವೈಯಕ್ತಿಕ ಚಾಂಪಿಯನ್‌ ಶಿಪ್ ಪಡೆದಿದ್ದು, 8ನೇ ತರಗತಿ ಬಾಲಕರ ವಿಭಾಗದಲ್ಲಿ ಕಾವು ಬುಶ್ರಾ ವಿದ್ಯಾಸಂಸ್ಥೆ ಮಹಮ್ಮದ್ ರುವೈಶ್ ಹಾಗೂ ಈಶ್ವರಮಂಗಲ ಗಜಾನನ ಶಾಲೆಯ ಮೃದುಲ್ ವೈಯಕ್ತಿಕ ಚಾಂಪಿಯನ್‌ ಶಿಪ್ ಪಡೆದು ಕೊಂಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ಶಾಲೆಯ ಧನ್ವಿ ಎ.ಎಂ, 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಷಣ್ಮುಖ ದೇವ ಪ್ರೌಢಶಾಲೆಯ ಮನ್ವಿತ್ ಮತ್ತು ಬಾಲಕಿಯರ ವಿಭಾಗದಲ್ಲಿ ಶಹನೀಯ ವೈಯಕ್ತಿಕ ಚಾಂಪಿಯನ್‌ ಶಿಪ್ ಪಡೆದುಕೊಂಡರು.

LEAVE A REPLY

Please enter your comment!
Please enter your name here