ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ತಿಂಗಳಾಡಿ ಇದರ ವತಿಯಿಂದ ಉಚಿತ ಆರೋಗ್ಯ ಮೇಳ (ಆಯುಷ್ಮಾನ್ ಭವ) ಅ.10ರಂದು ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ ತಿಂಗಳಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ. ಶಿಬಿರದಲ್ಲಿ ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ಮಂಗಳೂರು ಇಲ್ಲಿನ ತಜ್ಞ ವೈದ್ಯರುಗಳಿಂದ ಆರೋಗ್ಯ ತಪಾಸಣೆ, ಎನ್‌ಸಿಡಿ ಕ್ಯಾಂಪ್, ಅಭಾ ಕಾರ್ಡ್ ನೋಂದಣಿ, ಲ್ಯಾಬ್ ಸೌಲಭ್ಯಗಳು, ಆರ್ಗನ್ ಡೋನೇಷನ್ ಕ್ಯಾಂಪ್ ಇರಲಿದೆ. ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಆರೋಗ್ಯ ಕೇಂದ್ರದ ಪ್ರಕಟಣೆ ತಿಳಿಸಿದೆ.