ಶಿವಮೊಗ್ಗ ರಾಗಿಗುಡ್ಡ ಗಲಭೆ ವಿಚಾರದಲ್ಲಿ ರಾಜ್ಯ ಸರ್ಕಾರ ಮುಂಜಾಗ್ರತೆ ವಹಿಸಿ, ಸೂಕ್ಷ್ಮವಾಗಿ ವರ್ತಿಸಬೇಕಿತ್ತು – ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಜಿ ಪ್ರಧಾನಿ ದೇವೇ ಗೌಡ

0

ಕಡಬ: ಶಿವಮೊಗ್ಗ ಧಾರ್ಮಿಕ ಹಾಗೂ ಭಾವನಾತ್ಮಕ ವಿಚಾರದಲ್ಲಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು, ಅಲ್ಲಿನ ವಿಚಾರದಲ್ಲಿ ರಾಜ್ಯ ಸರ್ಕಾರ ಅತ್ಯಂತ ಜಾಗರೂಕತೆ ವಹಿಸಬೇಕಿತ್ತು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.

ಅವರು ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ ದೇವಸ್ಥಾನದಲ್ಲಿ ಮಾಧ್ಯಮದವರ ಜತೆ ಮಾತನಾಡಿದರು. ನಾನು ಶಿವಮೊಗ್ಗಕ್ಕೆ ತೆರಳಿ ಬಹಳ ವರ್ಷಗಳೇ ಕಳೆದಿವೆ. ಅಲ್ಲಿನ ಸದ್ಯದ ಪರಿಸ್ಥಿತಿ ಹೇಗಿದೆ? ನಿಜಕ್ಕೂ ಅಲ್ಲಿ ಏನಾಗಿದೆ? ಘಟನೆಗೆ ಕಾರಣ ಏನು ಎಂಬುದನ್ನು ನಾನು ಬೆಂಗಳೂರಿನಲ್ಲಿ ಕುಳಿತು ಹೇಳುವುದು ತಪ್ಪಾಗುತ್ತದೆ ಎಂದರು.

ಆದರೆ, ಶಿವಮೊಗ್ಗ ಮೊದಲಿನಿಂದಲೂ ಅತ್ಯಂತ ಸೂಕ್ಷ್ಮ ಜಿಲ್ಲೆಯಾಗಿದ್ದು, ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಜಾಗ್ರತೆ ಅವಶ್ಯವಾಗಿದೆ. ರಾಗಿಗುಡ್ಡ ಗಲಭೆ ವಿಚಾರದಲ್ಲಿ ರಾಜ್ಯ ಸರ್ಕಾರ ಮುಂಜಾಗ್ರತೆ ವಹಿಸಿ, ಸೂಕ್ಷ್ಮವಾಗಿ ವರ್ತಿಸಬೇಕಿತ್ತು ಎಂದು ಅಭಿಪ್ರಾಯಿಸಿದರು.

ಈ ಸಂದರ್ಭದಲ್ಲಿ ಜೆ.ಡಿ.ಎಸ್.ಮುಖಂಡ ಎಂ.ಬಿ.ಸದಾಶಿವ ಅವರು ಜತೆಗಿದ್ದರು.

LEAVE A REPLY

Please enter your comment!
Please enter your name here