ಪುತ್ತೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದ ವತಿಯಿಂದ ಭಾವ ಸಂಗಮ ಕಾರ್ಯಕ್ರಮವು ಅ.9ರಂದು ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ಮಾತನಾಡಿ ಮಾನವನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಂಗೀತ ಹೇಗೆ ಪೂರಕ ಎಂಬುದನ್ನು ವಿವರಿಸುವುದರೊಂದಿಗೆ ಹಲವು ರೋಗಗಳ ನಿವಾರಣೆಯಲ್ಲೂ ಸಂಗೀತ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂಬುದನ್ನು ಇವತ್ತು ವಿಜ್ಞಾನಿಗಳು ಸಾಬೀತುಪಡಿಸಿದ್ದಾರೆ ಎಂಬುದಾಗಿ ತಿಳಿಸಿದರು.
ಸಂಸ್ಥೆಯ ಉಪಪ್ರಾಂಶುಪಾಲ ಹಾಗೂ ಸಾಹಿತ್ಯ ಸಂಘದ ಸಂಘಟಕ ಶೇಷಗಿರಿ ಎಂ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಇಡಿ. ಅಶ್ವಿನ್ ಎಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ಡಾ.ನಾರಾಯಣ ಮೂರ್ತಿ, ಹಾಗೂ ಸಾಹಿತ್ಯ ಸಹಸಂಘಟಕ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.ವಿದ್ಯಾರ್ಥಿನಿಯಾದ ಶ್ರಾವ್ಯವಾಣಿ ಮತ್ತು ತಂಡ ಪ್ರಾರ್ಥಿಸಿ, ದ್ವಿತೀಯ ಬಿ.ಎ ವಿದ್ಯಾರ್ಥಿ ಚೇತನ್ ರೈ ಸ್ವಾಗತಿಸಿ ,ಸಾಹಿತ್ಯ ಸಂಘದ ಕಾರ್ಯದರ್ಶಿ ತೃತೀಯ ಬಿ.ಎ ವಿದ್ಯಾರ್ಥಿ ಪಿ.ಪ್ರವೀಣ ವಂದಿಸಿದರು. ಅಂತಿಮ ಬಿ.ಎ ವಿದ್ಯಾರ್ಥಿ ಶಮೀರ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ನಂತರ ಸಂಪನ್ಮೂಲ ವ್ಯಕ್ತಿ ಚೈತ್ರಿಕಾ ಕೋಡಿಬೈಲು ಇವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಇವರಿಗೆ ಹಿನ್ನಲೆ ಗಾಯಕರಾಗಿ ಸುಭಾಷ್ ಹೆಬ್ಬಾರ್ ತಬಲದಲ್ಲಿ ಹಾಗೂ ಹಾರ್ಮೋನಿಯಂನಲ್ಲಿ ಸಾಯಿ ಸುಬ್ರಹ್ಮಣ್ಯ ಭಟ್ ಸಹಕರಿಸಿದರು.