ಉಪ್ಪಿನಂಗಡಿ: ಇಲ್ಲಿನ ಇಂಡಿಯನ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿ ಸುಜಾಸ್ ಅಲಿ ಕೆ. ಎತ್ತರ ಜಿಗಿತ ಹಾಗೂ ಉದ್ದ ಜಿಗಿತದಲ್ಲಿ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ.
ಪೆರಿಯಡ್ಕದ ಸರ್ವೋದಯ ಪ್ರೌಢಶಾಲೆಯಲ್ಲಿ ನಡೆದ 2023-24ನೇ ಸಾಲಿನ ಉಪ್ಪಿನಂಗಡಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಈತ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದ. ಈತನಿಗೆ ಶಿಕ್ಷಕಿ ರೇವತಿಯವರು ತರಬೇತಿ ನೀಡಿದ್ದರು ಎಂದು ಶಾಲಾ ಪ್ರಕಟನೆ ತಿಳಿಸಿದೆ.