ಇಂದ್ರಪ್ರಸ್ಥದಲ್ಲಿ ‘ಅಂಕುರ’ ಅಧ್ಯಯನ ಪುಸ್ತಕ ಬಿಡುಗಡೆ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸುತ್ತಿರುವ ‘ಅಂಕುರ’ ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಕ್ರಮದಲ್ಲಿ ರಾಜಸ್ಥಾನದ ಕೋಟದಲ್ಲಿರುವ ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಬೇಕಾದ ಮಾಹಿತಿಗಳನ್ನೊಳಗೊಂಡ ಅಧ್ಯಯನ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು.


ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಸಲಹೆಗಾರ ರಾಜೇಶ್ ಪೈ ಹಾಗೂ ಆಡಳಿತ ಮಂಡಳಿಯ ಸದಸ್ಯ ಸುಧಾಕರ್ ಪುಸ್ತಕಗಳನ್ನು ಬಿಡುಗಡೆಗೊಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಕೆ. ಪ್ರಕಾಶ್ ಮಾತನಾಡಿ, ‘ಅಂಕುರ’ ತರಬೇತಿಯನ್ನು ಪಡೆದುಕೊಂಡ ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನದಲ್ಲಿ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯವನ್ನು ಪಡೆಯಬಲ್ಲರು ಎಂದರು.


ಇಂದ್ರಪ್ರಸ್ಥ ವಿದ್ಯಾಲಯದ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಆರ್ ಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳು ‘ಅಂಕುರ’ ತರಗತಿಯ ಸದುಪಯೋಗವನ್ನು ಸಮರ್ಪಕವಾಗಿ ಪಡೆದುಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭ ಭೌತಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವಾತಿ ಬಿ.ಎಸ್. ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಸುಂದರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here