ಕಡಬ ವಲಯ ಮಟ್ಟದ ಕ್ರೀಡಾಕೂಟ-ರಾಮಕುಂಜ ಆ.ಮಾ ಶಾಲೆಯ ಮೂವರು ವೈಯಕ್ತಿಕ ಚಾಂಪಿಯನ್, ಬಾಲಕರ ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಕಡಬ ಸರಕಾರಿ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಅ.6 ಮತ್ತು 7ರಂದು ಕಡಬ ಸರಕಾರಿ ಪ.ಪೂ.ಕಾಲೇಜಿನಲ್ಲಿ ನಡೆದ ಕಡಬ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ಕ್ರೀಡಾಕೂಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ 47 ವಿದ್ಯಾರ್ಥಿಗಳು ಭಾಗವಹಿಸಿದ್ದರು.


17ರ ವಯೋಮಾನದ ಒಳಗಿನ ಬಾಲಕರ ವಿಭಾಗದಲ್ಲಿ ಧನುಷ್ ಆರ್, ಕಾರ್ತಿಕ್ ಎಸ್.ಆರ್ ಹಾಗೂ ಭರತ್ ಗೌಡ ಎಂ.ಪಿ ವೈಯಕ್ತಿಕ ಚಾಂಪಿಯನ್ ಪಡೆದಿದ್ದಾರೆ. ಪ್ರಾಥಮಿಕ ವಿಭಾಗದ ಬಾಲಕರ ತಂಡವು ದ್ವಿತೀಯ ಸಮಗ್ರ ಪ್ರಶಸ್ತಿ, 8ನೇ ತರಗತಿಯ ವಿಭಾಗದ ಬಾಲಕರ ತಂಡ ಪ್ರಥಮ ಸಮಗ್ರ ಪ್ರಶಸ್ತಿ ಹಾಗೂ 17ರ ವಯೋಮಾನದ ಒಳಗಿನ ಬಾಲಕರ ತಂಡ ಪ್ರಥಮ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಒಟ್ಟು 37 ಕ್ರೀಡಾಪಟುಗಳು ಅ.26 ಮತ್ತು27ರಂದು ಸರಕಾರಿ ಪ್ರೌಢಶಾಲೆ ಹಿರೇಬಂಡಾಡಿ ಇಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.


ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್ ಹಾಗೂ ಮೂರ್ತಿ ತರಬೇತಿ ನೀಡಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ, ವ್ಯವಸ್ಥಾಪಕ ರಮೇಶ್ ರೈ ಆರ್.ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here