ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಆಯ್ಕೆ

0

ಪುತ್ತೂರು: ಹೈದರಾಬಾದ್ ನಲ್ಲಿ ಅ.10ರಂದು ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ತಂಡ ಪ್ರಶಸ್ತಿಯನ್ನು ಪಡೆದು ಬಿಹಾರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಅಭಿಷೇಕ್, ಕೀರ್ತನ್ ಎಸ್ ಕೆ, ಬ್ರಿಜೇಷ್, ಸುಶಾನ್, ಪ್ರಮಥ್, ನಿಹಾಲ್ ರಾಜ್, ಆಯುಷ್ ಭಾಗವಹಿಸಿದ್ದರು. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here