ಬಡಗನ್ನೂರು: ಅ.15ರಿಂದ 24ರವರೆಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವ

0

ಬಡಗನ್ನೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವ ಅ.15 ರಿಂದ 24ರ ವರೆಗೆ ನಡೆಯಲಿದ್ದು, ವಿಶೇಷ ದೀಪಾಂಕಾರಗಳಿಂದ ಕಂಗೊಳಿಸಲಿದೆ. ಅ.15ರಂದು ಬೆಳಗ್ಗೆ ಗಣಪತಿ ಹವನ ತೆನೆ ಕಟ್ಟುವ ಮೂಲಕ ಸಂಭ್ರಮದಿಂದ ಆರಂಭಗೊಳ್ಳಲಿದ್ದು, ನವರಾತ್ರಿ ಸಂದರ್ಭದಲ್ಲಿ ಮಾತೆ ದೇಯಿ ಬೈದೆತಿಗೆ 9 ದಿವಸಗಳಲ್ಲಿ ವಿಶೇಷ ಅಲಂಕಾರ ಪೂಜೆ ಜರಗಲಿದೆ.

ಸುಮಾರು 21 ಭಜನಾ ತಂಡಗಳಿಂದ ಶ್ರೀ ಕ್ಷೇತ್ರದಲ್ಲಿ ನಿರಂತರ ಭಜನಾ ಸಂಕೀರ್ತನೆ ನಡೆಯಲಿದೆ. ಮಧ್ಯಾಹ್ನ12.30ಕ್ಕೆ ಪುಷ್ಪಲಂಕಾರ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನೆರವೇರಲಿದೆ. 

ಈ ಸಂದರ್ಭದಲ್ಲಿ ಭಕ್ತಾಧಿಗಳಿಗೆ ವಿಶೇಷ ಸೇವೆಗಳಿಗೆ ಅವಕಾಶ ಮಾಡಲಾಗಿದ್ದು, ದೇಯಿ ಬೈದೆತಿಗೆ ಪುಷ್ಪಲಂಕಾರ, ಅನ್ನದಾನ ಸೇವೆ ಹಾಗೂ ನವರಾತ್ರಿ ಪೂಜಾ ಸೇವೆ ಮಾಡುವ ಅವಕಾಶ ಕಲ್ಪಿಸಲಾಗಿದೆ. ಅ.24 ವಿಜಯ ದಶಮಿಯ ಪರ್ವ ದಿವಸದಂದು ಸರಸ್ವತಿ ಪೂಜೆ ಹಾಗೂ ಪೂರ್ವಾಹ್ನ ಬೆಳಿಗ್ಗೆ 8 ರಿಂದ ಮಧ್ಯಾಹ್ನ ದವರೆಗೆ ಪುಟಾಣಿಗಳಿಗೆ ಅಕ್ಷರಾಭ್ಯಾಸ ನಡೆಯಲಿದೆ. ಶ್ರೀ ಕ್ಷೇತ್ರ ಗೆಜ್ಜೆಗಿರಿಯ ನವರಾತ್ರಿಯ ಪವಿತ್ರ ದಿನಗಳ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜರಾಜೇಶ್ವರಿ ಸ್ವರೂಪಿಣಿ ಮಹಾ ಮಾತೆ ದೇಯಿ ಬೈದೆತಿ ಹಾಗೂ ಸರ್ವ ಶಕ್ತಿಗಳ ಕೃಪಾಶೀರ್ವಾದವನ್ನು ಪಡೆಯಬೇಕೆಂದು ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೆರಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here